ಇಂಗ್ಲೆಂಡ್ ವಿರುದ್ಧದ ಸರಣಿ ಗೆದ್ದ ಭಾರತ: ಟೀಮ್ ಇಂಡಿಯಾದಲ್ಲಿ ಸಂಭ್ರಮ, ಫೋನ್ ನಲ್ಲೇ ಮೈ ಮರೆತ ಕೊಹ್ಲಿ!

0
Spread the love

ಟೀಂ ಇಂಡಿಯಾದ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ವೈಟ್‌ವಾಶ್ ಮಾಡಿದೆ.

Advertisement

ಈ ಗೆಲುವಿನ ಬಳಿಕ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಕೈಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸಿದರು. ಆ ಬಳಿಕ ನಡೆದ ಫೋಟೋಶೂಟ್​ ವೇಳೆ ಭಾರತೀಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು.

ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲದಂತೆ ವಿರಾಟ್ ಕೊಹ್ಲಿ ಮಾತ್ರ ಫೋನ್​ನಲ್ಲೇ ಮೈಮರೆತಿದ್ದರು. ಇದೀಗ ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೂ, ಕೊಹ್ಲಿ ಫೋನ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪರ ವಿರೋಧ ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗುತ್ತಿದೆ. ಕೆಲವರು ಕೊಹ್ಲಿಯನ್ನು ಫ್ಯಾಮಿಲಿ ಮ್ಯಾನ್ ಎಂದು ಹಾಡಿ ಹೊಗಳಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿಯ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫಾರ್ಮ್​ಗೆ ಮರಳಿದ ಕಿಂಗ್ ಕೊಹ್ಲಿ:
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮತ್ತೆ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಕೊಹ್ಲಿ, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆತ್ಮ ವಿಶ್ವಾಸದಿಂದಲೇ ಬ್ಯಾಟ್ ಬೀಸಿದ್ದರು.

ಅಲ್ಲದೆ 55 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 52 ರನ್ ಬಾರಿಸಿ ಭಾರತ ತಂಡದ ಬೃಹತ್ ಮೊತ್ತಕ್ಕೆ ತನ್ನದೆಯಾದ ಕೊಡುಗೆ ನೀಡಿದ್ದರು. ಇದೀಗ ಫಾರ್ಮ್​ಗೆ ಮರಳಿರುವ ಕಿಂಗ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಇದೇ ಲಯವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.


Spread the love

LEAVE A REPLY

Please enter your comment!
Please enter your name here