ನವದೆಹಲಿ: ಆಪರೇಷನ್ ಸಿಂಧೂರ್ನಲ್ಲಿ ಭಾರತ ಸೇನೆಯು ನಿಗದಿ ಪಡಿಸಿದ್ದ ಗುರಿಯನ್ನು ಶೇ.100ರಷ್ಟು ಸಾಧಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಧಿವೇಶನಕ್ಕೂ ಮುನ್ನ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಳವನ್ನು ಕಂಡಿದೆ. ಆಪರೇಷನ್ ಸಿಂಧೂರ್ನಲ್ಲಿ ಭಾರತ ಸೇನೆಯು ನಿಗದಿ ಪಡಿಸಿದ್ದ ಗುರಿಯನ್ನು ಶೇ.100ರಷ್ಟು ಸಾಧಿಸಿದೆ.
ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಕೇವಲ 22 ನಿಮಿಷಗಳಲ್ಲಿ ನೆಲ ಸಮ ಮಾಡಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ನೀರಿನ ಸಂಗ್ರಹ ಸುಮಾರು ಮೂರು ಪಟ್ಟು ಹೆಚ್ಚಾಗಿದೆ, ಇದು ಇಡೀ ದೇಶಕ್ಕೆ. ವಿಶೇಷವಾಗಿ ರೈತರು, ಹಳ್ಳಿಗಳು ಮತ್ತು ಸಾಮಾನ್ಯ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಅಧಿವೇಶನವು ಆಗಸ್ಟ್ 12ಕ್ಕೆ ಪೂರ್ಣಗೊಳ್ಳಲಿದೆ. ಮತ್ತೆ ಆಗಸ್ಟ್ 18ರಂದು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್, ಡೊನಾಲ್ಡ್ ಟ್ರಂಪ್, ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆ.


