ಕೆನಾಡದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ!

0
Spread the love

ಕೆನಡಾ: ಉನ್ನತ ವ್ಯಾಸಂಗಕ್ಕಾಗಿ ಕೆನಡಾಕ್ಕೆ ಹೋಗಿದ್ದ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಹರ್ಸಿಮ್ರತ್ ರಾಂಧವಾ(22) ಮೃತ ವಿದ್ಯಾರ್ಥಿನಿಯಾಗಿದ್ದು, ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿನಿಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Advertisement

ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ತಂಡವೊಂದು ಕಾರ್ಯನಿರ್ವಹಿಸುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Spread the love

LEAVE A REPLY

Please enter your comment!
Please enter your name here