IND vs NZ: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಹೀನಾಯ ಸೋಲು…!

0
Spread the love

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

Advertisement

ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ (2) ಕ್ಲೀನ್ ಬೌಲ್ಡ್ ಮಾಡುವ ಮೂಲಕ ಟಿಮ್ ಸೌಥಿ ನ್ಯೂಝಿಲೆಂಡ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (0) ಒರೋಕ್ ಎಸೆತದಲ್ಲಿ ಕ್ಯಾಚ್ ನೀಡಿದರು. ಆ ಬಳಿಕ ಬಂದ ಸರ್ಫರಾಝ್ ಖಾನ್ (0) ಮ್ಯಾಟ್ ಹೆನ್ರಿ ಎಸೆತದಲ್ಲಿ ಕ್ಯಾಚಿತ್ತು ನಿರ್ಗಮಿಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ಆಡಿದ ಯಶಸ್ವಿ ಜೈಸ್ವಾಲ್ 63 ಎಸೆತಗಳನ್ನು ಎದುರಿಸಿ 13 ರನ್ ಕಲೆಹಾಕಿದರು. ಆದರೆ ಒರೋಕ್ ಎಸೆತದಲ್ಲಿ ಅಜಾಝ್ ಪಟೇಲ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಜೈಸ್ವಾಲ್ ಇನಿಂಗ್ಸ್​ ಕೂಡ ಅಂತ್ಯಗೊಂಡಿತು. ಆ ಬಳಿಕ ಬಂದ ಕೆಎಲ್ ರಾಹುಲ್ (0) ಹಾಗೂ ರವೀಂದ್ರ ಜಡೇಜಾ (0) ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು. ಇನ್ನು ರಿಷಭ್ ಪಂತ್ 20 ರನ್ ಬಾರಿಸಿ ಮ್ಯಾಟ್ ಹೆನ್ರಿ ಎಸೆತದಲ್ಲಿ ಕ್ಯಾಚ್ ನೀಡಿದರು. ಇದರ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್ (0) ಹಾಗೂ ಜಸ್​ಪ್ರೀತ್ ಬುಮ್ರಾ (2) ಔಟಾದರು.

ಕೊನೆಯ ವಿಕೆಟ್​ಗೆ ಜೊತೆಗೂಡಿದ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ 6 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಹೆನ್ರಿ ಎಸೆತದಲ್ಲಿ ಕ್ಯಾಚ್ ನೀಡಿ ಕುಲ್ದೀಪ್ ಯಾದವ್ (2) ಇನಿಂಗ್ಸ್ ಅಂತ್ಯಗೊಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ನ್ಯೂಝಿಲೆಂಡ್ ಪರ ಡೆವೊನ್ ಕಾನ್ವೆ 91 ರನ್ ಬಾರಿಸಿದರೆ, ರಚಿನ್ ರವೀಂದ್ರ 134 ರನ್ ಚಚ್ಚಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 402 ರನ್ ಕಲೆಹಾಕಿ ಆಲೌಟ್ ಆಯಿತು.


Spread the love

LEAVE A REPLY

Please enter your comment!
Please enter your name here