ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗಿದೆ: ತಹಸೀಲ್ದಾರ ಧನಂಜಯ ಎಂ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಜಾಪ್ರಭುತ್ವವನ್ನು ಬಲಪಡಿಸಲು, ಅದರ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿಹಿಡಿಯಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಹಳ ದೊಡ್ಡದಿದ್ದು, ಅಷ್ಟೇ ಬಲಿಷ್ಠವಾಗಿದೆ ಎಂದು ತಹಸೀಲ್ದಾರ ಧನಂಜಯ ಎಂ ಹೇಳಿದರು.

Advertisement

ಅವರು ಪಟ್ಟಣದ ತಹಸೀಲ್ದಾರರ ಕಚೇರಿಯಲ್ಲಿ ಸೋಮವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಭಾರತದಲ್ಲಿ ಸಂಸತ್ತು ಅಥವಾ ನ್ಯಾಯಾಂಗವಲ್ಲದ ಸಂವಿಧಾನವೇ ಸರ್ವೋಚ್ಚವಾಗಿದೆ. ಭಾರತವು ಲಿಖಿತ ಸಂವಿಧಾನವನ್ನು ಹೊಂದಿದೆ. ಇದರಲ್ಲಿ ನಾಗರಿಕರ ಹಕ್ಕುಗಳು, ಸ್ವಾತಂತ್ರ್ಯಗಳು ಮತ್ತು ಕರ್ತವ್ಯಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಮ್ಮ ಕ್ಷೇತ್ರದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಶ್ರಮಿಸಿದ ಸರ್ವರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.

ತಾ.ಪಂ ಇಒ ಕೃಷ್ಣಪ್ಪ ಧರ್ಮರ ಮಾತನಾಡಿ, ಇಡೀ ದೇಶದ ಜನತೆ ಒಪ್ಪಿಕೊಂಡಿರುವ ಸಂವಿಧಾನದ ಪ್ರಕಾರ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆಗಳಿಗೆ ಹೆಚ್ಚಿನ ಮನ್ನಣೆ ಇದೆ. ಇದನ್ನೇ ಸಂವಿಧಾನ ಒತ್ತಿಹೇಳುತ್ತದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಬಿಂಬಿಸುತ್ತದೆ. ಕಾರಣ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಜಿ.ಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ, ಫಕ್ಕೀರೇಶ ಭಜಕ್ಕನವರ ಮಾತನಾಡಿದರು. ಬಿಆರ್‌ಪಿ ಈಶ್ವರ ಮೆಡ್ಲೇರಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಮುತ್ತಣ್ಣ ಸಂಕನೂರ, ವಾರ್ಡನ್‌ಗಳಾದ ಬಿ.ಎಸ್. ಹಡಪದ, ಕೆ.ಎಫ್. ತಳವಾರ, ಫಕ್ಕೀರೇಶ ನಂದೆಣ್ಣವರ, ಅನಿಲ ಮುಳಗುಂದ, ಅಂಬರೀಶ ತೆಂಬದಮನಿ, ತಾಲೂಕು ಮಟ್ಟದ ಅಧಿಕಾರಿಗಳು, ತಹಸೀಲ್ದಾರ ಕಚೇರಿ ಸಿಬ್ಬಂದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here