HomeIndia Newsಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ!

ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ!

For Dai;y Updates Join Our whatsapp Group

Spread the love

ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ.

86 ವರ್ಷದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ.

ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿ ಕುರಿತಂತೆ ಎರಡು ದಿನದ ಹಿಂದಷ್ಟೇ ವದಂತಿ ಹಬ್ಬಿದಾಗ ‘ನಾನು ಆರೋಗ್ಯವಾಗಿದ್ದೇನೆ’ ಎಂದು ಸ್ವತಃ ಸ್ಪಷ್ಟನೆ ನೀಡಿದ್ದರು.

ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರು 11.30 ಗಂಟೆಗೆ ಅವರು ಮೃತಪಟ್ಟರು. ಇದರೊಂದಿಗೆ ದೇಶದ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದಿದ್ದ ರತನ್‌ ಟಾಟಾ ಎಂಬ ಚೇತನ ನಂದಿಹೋಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!