ಪಾಕ್‌ ವಿರುದ್ಧ ಭಾರತಕ್ಕೆ ಜಯ: ಗೆಲುವಿನ ಬಗ್ಗೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು..?

0
Spread the love

ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ರ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿದೆ. ಪಾಕಿಸ್ತಾನ 127 ರನ್‌ಗಳಿಗೆ ಆಲೌಟ್ ಆಗಿತು. ಭಾರತ ಸುಲಭವಾಗಿ ಗೆಲುವು ಸಾಧಿಸಿತು. ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಮೊದಲ ವಿಕೆಟ್ ಪಡೆದರು. ಕುಲ್ದೀಪ್ ಯಾದವ್ 3 ವಿಕೆಟ್ ಪಡೆದು ಮಿಂಚಿದರು. ಈ ಗೆಲುವಿನೊಂದಿಗೆ ಭಾರತ ಟೂರ್ನಿಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ.

Advertisement

ಇನ್ನೂ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಪಂದ್ಯದ ನಂತರ ತಮ್ಮ ಹೇಳಿಕೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮತ್ತು ದೇಶದ ಸಶಸ್ತ್ರ ಪಡೆಗಳಿಗೆ ಈ ಗೆಲುವನ್ನು ಅರ್ಪಿಸಿದ್ದಾರೆ.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಸೂರ್ಯ, ‘ಒಂದು ವಿಷಯ ಹೇಳಲು ಬಯಸಿದ್ದೆ. ಇದು ಸೂಕ್ತ ಅವಕಾಶ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ. ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ’ ಎಂದು ಹೇಳಿದರು.

ಮಾತು ಮುಂದುವರೆಸಿದ ಭಾರತೀಯ ನಾಯಕ, ‘ಈ ವಿಜಯವನ್ನು ನಮ್ಮ ಎಲ್ಲಾ ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಬಯಸುತ್ತೇನೆ, ಅವರು ಅದಮ್ಯ ಧೈರ್ಯವನ್ನು ತೋರಿಸಿದ್ದಾರೆ. ಅವರು ನಮಗೆ ಸದಾ ಸ್ಫೂರ್ತಿ ನೀಡುತ್ತಲೇ ಇರುತ್ತಾರೆ ಎಂದು ಭಾವಿಸುತ್ತೇವೆ ಮತ್ತು ನಮಗೆ ಅವಕಾಶ ಸಿಕ್ಕಾಗಲೆಲ್ಲಾ ನಾವು ಅವರಿಗೆ ಮೈದಾನದಲ್ಲಿ ನಗಲು ಹೆಚ್ಚಿನ ಕಾರಣಗಳನ್ನು ನೀಡುತ್ತೇವೆ” ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here