ರಾಮನಗರ: ಪ್ರೀತಿಯ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಮನಗರದ ಮಾಗಡಿ ಪಟ್ಟಣದಲ್ಲಿ ನಡೆದಿದ್ದು, ಮಾಗಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರು ವಿಕಾಸ್, ಪ್ರಶಾಂತ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಂದಿಗೆ ವಿಕಾಸ್ ಪ್ರೀತಿಯ ನೆಪದಲ್ಲಿ ಪರಿಚಯ ಮಾಡಿಕೊಂಡಿದ್ದಾನೆ. ನಂತರ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಿದ ವಿಕಾಸ್, ಯುವತಿ ಜೊತೆ ಲೈಂಗಿಕ ಸಂಪರ್ಕ ಸಾಧಿಸಿದ್ದನು. ಅದಲ್ಲದೆ ʻನಾನು ಕರೆದಾಗಲೆಲ್ಲ ನೀನು ನಾನು ಹೇಳುವ ಸ್ಥಳಕ್ಕೆ ಬರಬೇಕುʼ ಎಂದು ಆ ಎಂದು ವಿಡಿಯೋವನ್ನು ಬಳಸಿಕೊಂಡು ವಿಕಾಸ್ ಯುವತಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ.
ಈ ಬೆದರಿಕೆ ಸುಮಾರು ಮೂರು ತಿಂಗಳ ಹಿಂದಿನಿಂದಲೂ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.ಇಷ್ಟಕ್ಕೇ ನಿಲ್ಲದೆ, ವಿಕಾಸ್ ತನ್ನ ಸ್ನೇಹಿತರಾದ ಪ್ರಶಾಂತ್ ಮತ್ತು ಚೇತನ್ ಎಂಬುವವರನ್ನು ಈ ಪ್ರಕರಣದಲ್ಲಿ ಸೇರಿಸಿಕೊಂಡಿದ್ದಾನೆ. ಈ ಮೂವರು ಸೇರಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ನಿರಂತರ ದೌರ್ಜನ್ಯ ಎಸಗುತ್ತಿರುವುದನ್ನು ಸಹಿಸಲಾಗದ ಆಕೆ, ಧೈರ್ಯ ಮಾಡಿ ಯುವತಿ ಮಾಗಡಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ. ಯುವತಿಯ ದೂರಿನ ಮೇರೆಗೆ, ಮಾಗಡಿ ಠಾಣೆ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.



