ಅಮಾನುಷ ಘಟನೆ: ಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ!

0
Spread the love

ಚಿಕ್ಕಮಗಳೂರು:- ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ ನಡೆದಿದ್ದು, 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ.

Advertisement

ಜಿಲ್ಲೆಯ ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಜ್ವರ ಬಂದ ಹಿನ್ನೆಲೆ ಅಂಗನವಾಡಿಗೆ ಹೋಗದೇ ಬಾಲಕಿ ಮನೆಯಲ್ಲೇ ಇದ್ದಳು. ಇದನ್ನು ತಿಳಿದುಕೊಂಡು ಮನೆಗೆ ನುಗ್ಗಿದ ದುರುಳರು, ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದಾರೆ. ನಂತರ ಬಾಲಕಿಯ ಮೃತದೇಹವನ್ನು ಬೆಡ್​ಶೀಟ್​ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದಾರೆ.

ಜ್ವರ ಎಂದು ಮಗು ಅಂಗನವಾಡಿಗೆ ಹೋಗಿರಲಿಲ್ಲ. ಇತ್ತ ತಾಯಿ ಜಮೀನು ಕೆಲಸಕ್ಕೆ ತೆರಳಿದ್ದರು. ಇದನ್ನೇ ಕಾಯುತ್ತಿದ್ದ ಕಾಮಾಂಧರು ಏಕಾಂಗಿಯಾಗಿದ್ದ ಮಗು ಮೇಲೆ ಅಮಾನುಷವಾಗಿ ಹಿಂಸೆಗೈದು, ಹತ್ಯೆ ಮಾಡಿದ್ದಾರೆ. ಇತ್ತ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.


Spread the love

LEAVE A REPLY

Please enter your comment!
Please enter your name here