ಅಮಾನವೀಯ ಕೃತ್ಯ: ಕರುವಿನ ಬಾಲ ಕತ್ತರಿಸಿದ ದುರುಳ!

0
Spread the love

ಉಡುಪಿ:- ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ್ದಾನೆ.

Advertisement

ಗುಂಡ್ಮಿಯಲ್ಲಿ ಮಯ್ಯ ಕುಟುಂಬದ ಮನೆಯೊಂದಕ್ಕೆ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ದುರುಳ, ಮನೆಯವರನ್ನು ಕರೆದು ವಸ್ತುಗಳನ್ನು ತೋರಿಸಿದ್ದಾನೆ. ವಸ್ತುಗಳ ಖರೀದಿಗೆ ನಿರಾಕರಿಸಿ ಮಹಿಳೆ ಮನೆ ಬಾಗಿಲು ಹಾಕಿದ್ದಾರೆ. ಆ ಬಳಿಕ ಮನೆ ಬಳಿಯೇ ಇದ್ದ 2 ವರ್ಷದ ಕರುವಿನ ಬಾಲ ಕತ್ತರಿಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದ, ಮೈಸೂರಿನಲ್ಲಿ ಗೂಳಿಯ ಬಾಲ ಕತ್ತರಿಸಿದ ಘಟನೆ ಬೆನ್ನಲ್ಲೇ ಈ ಘಟನೆ ನಡೆದಿರೋದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.


Spread the love

LEAVE A REPLY

Please enter your comment!
Please enter your name here