ಚೆನ್ನೈ:- ಅಮಾನವೀಯ ಕೃತ್ಯ ಒಂದು ತಮಿಳುನಾಡಿನಲ್ಲಿ ಜರುಗಿದ್ದು, ಮೂವರು ಶಿಕ್ಷಕರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಜರುಗಿದೆ.
ತಮಿಳುನಾಡಿನ ಕೃಷ್ಣಗಿರಿಯಲ್ಲಿ 13 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ರೇಪ್ ಮಾಡಿದ್ದಾರೆ. ಘಟನೆ ಹಿನ್ನೆಲೆ ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಎಂಬ ಶಿಕ್ಷಕರನ್ನು ಅರೆಸ್ಟ್ ಮಾಡಲಾಗಿದೆ. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಪೋಷಕರು, ಆಕೆ ಮೇಲೆ ಶಾಲೆಯಲ್ಲಿ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಬಗ್ಗೆ ತಿಳಿಸಿದ್ದಾರೆ.
ವಿಷಯ ತಿಳಿದ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಬಳಿಕ ಕೃಷ್ಣಗಿರಿ ಜಿಲ್ಲೆಯ ಬಾರ್ಕೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಾಮುಕ ಮೂವರು ಶಿಕ್ಷಕರನ್ನ ಬಂಧಿಸಿದ್ದಾರೆ.