ಬೆಂಗಳೂರು: ಸಾಕುಪ್ರಾಣಿಗಳನ್ನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವವರು ಅನೇಕರು. ಇತ್ತೀಚೆಗೆ ತಮ್ಮ ಸಾಕುನಾಯಿಯನ್ನು ಕುಂಭಮೇಳಕ್ಕೆ ಕರೆದುಕೊಂಡು ಹೋಗಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿಸಿದ ಹೃದಯಸ್ಪರ್ಶಿ ಘಟನೆ ವೈರಲ್ ಆಗಿತ್ತು. ಆದರೆ ಇದೇ ನಗರದಲ್ಲಿ ನಡೆದ ಮತ್ತೊಂದು ಘೋರ ಘಟನೆ ನಡೆದಿದೆ.
ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಹಿಳೆ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಂದಿರುವ ಅಮಾನವೀಯ ಘಟನೆ ನಡೆದಿದೆ. ಅಕ್ಟೋಬರ್ 31ರಂದು ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್‌ನ ಲಿಫ್ಟ್‌ನ ಸಿಸಿ ಕ್ಯಾಮೆರಾದಲ್ಲಿ ಈ ಕೃತ್ಯ ಸೆರೆಯಾಗಿದೆ.
ಮನೆಕೆಲಸದಾಕೆ ಪುಷ್ಪಲತಾ ಎಂಬ ಮಹಿಳೆ ಈ ಕೃತ್ಯ ಎಸಗಿದ್ದು .ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ನಾಯಿ ಸಾಯಿಸಿದ ಬಳಿಕ ಲಿಫ್ಟ್ ಇಂದ ಹೊರಗೆ ಹೋಗಿ ಬಿತ್ತು ಎಂದು ಪುಷ್ಪಾಲತಾ ಕಥೆ ಕಟ್ಟಿದ್ದಳು. ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಮಾಹಿತಿ ದೊರಕಿದೆ. ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಪುಷ್ಪಲತಾ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



