HomeGadag Newsಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ : ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ : ಕೃಷ್ಣ ಭೈರೇಗೌಡ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕರುನಾಡಿಗೆ ಕೊಟ್ಟಿದ್ದು ಚೊಂಬು. ಜಿಎಸ್‌ಟಿ ಹಣದಲ್ಲೂ ಮಲತಾಯಿ ಧೋರಣೆ ಅನುಸರಿಸುವ ಕೇಂದ್ರ ಸರ್ಕಾರ ಬರ ಪರಿಹಾರ ವಿಷಯದಲ್ಲೂ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದರು.

ಹಾವೇರಿ-ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಗದಗ ನಗರದ ವಾರ್ಡ್ ನಂ.33ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರವಾಗಿ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.

ಅನೇಕ ಬಡವರ ಪರ ಹಾಗೂ ಕಾರ್ಮಿಕರ ಪರವಾದ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರವು ಈ ಬಾರಿ ಕ್ರಾಂತಿಕಾರಕ ಪಂಚ ನ್ಯಾಯ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಜನರ ನಿರೀಕ್ಷೆಯಂತೆ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲವನ್ನೂ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ರೈತರ ಸಾಲಮನ್ನಾ ಮಾಡದ ಬಿಜೆಪಿ ಉದ್ದಿಮೆದಾರರ ಕೋಟಿಗಳಷ್ಟು ಸಾಲವನ್ನು ಪ್ರತಿವರ್ಷ ಮನ್ನಾ ಮಾಡುತ್ತ ಬರುತ್ತಿದೆ. ಬಿಜೆಪಿಯ ರೈತರ, ಬಡವರ ಬಗ್ಗೆ ಇರುವ ಡೋಂಗಿ ನೀತಿಗೆ ಇತಿಶ್ರೀ ಹೇಳವ ಸಮಯ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಅವರಿಗೆ ನಿಮ್ಮ ಸೇವೆ ಮಾಡಲು ಒಂದು ಅವಕಾಶ ನೀಡಿ, ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಆರ್. ಪಾಟೀಲ, ರಾಮಣ್ಣ, ವಾರ್ಡ್ ಸದಸ್ಯರಾದ ಚಿಮ್ಮಿ ನದಾಫ, ಗದಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬರ್ಚಿ, ಬುಡ್ಡಣ್ಣ ಹಬೀಬ್ ಸೇರಿದಂತೆ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img