ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ. ನುಡಿದಂತೆ ನಡೆದ ಸರಕಾರ ಎಂದು ಬಿಂಬಿಸುತ್ತಿರುವ ಸರಕಾರ ಈ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ಅಲ್ಪಸಂಖ್ಯಾತ ಮುಖಂಡರು ಕಳೆದ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ೫೦೦೦ ಕೋಟಿ ರೂ.ಗಳ ಮಂಜೂರಿಗಾಗಿ ಬೇಡಿಕೆ ಸಲ್ಲಿಸಿತ್ತು. ಕಳೆದ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಸ್ಲಮ್ ಕಾಲೊನಿಯ ಅಭಿವೃದ್ಧಿ ಯೋಜನೆಗೆ ಇನ್ನೂರು ಕೋಟಿ ಘೋಷಿಸಿತ್ತಾದರೂ ಯಾವುದೇ ಹಣ ಬಿಡುಗಡೆಯಾಗಿಲ್ಲ.
ಸರಕಾರ ಅಲ್ಪಸಂಖ್ಯಾತರ ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂಬುದು ಸ್ಪಷ್ಟವಾಗಿದೆ. ಒಟ್ಟಿನಲ್ಲಿ, ಗ್ಯಾರಂಟಿಗೆ ಸರಕಾರ ಹೆಚ್ಚು ಒತ್ತು ಕೊಟ್ಟಂತೆ ಕಂಡು ಬರುತ್ತದೆ. ಹೊರತಾಗಿ, ರೈತರಿಗೆ, ಆರ್ಥಿಕ ದುರ್ಬಲ ವರ್ಗದವರಿಗೆ ತ್ವರಿತ ನ್ಯಾಯ ಒದಗಿಸಲು ಸಿವಿಲ್ ಪ್ರಕ್ರಿಯೆ ಸಂಹಿತೆ ಆಧಿನಿಯಮ, ವಸತಿ ರಹಿತರನ್ನು ಗುರುತಿಸಲು ಸಮೀಕ್ಷೆ, ನ್ಯಾಯಾಲಯದ ಕಲಾಪದ ನೇರ ಪ್ರಸಾರ ಇವೆಲ್ಲವೂ ಉತ್ತಮ ಅಂಶವಾಗಿದೆ ಎಂದಿದ್ದಾರೆ.