ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಬಂಗಾರಪೇಟೆ ನಿವಾಸಿ ಮುಜಾಮಿಲ್ ಮೃತ ಬಾಲಕ. ಇನೋವಾ ಕಾರಿನಲ್ಲಿದ್ದ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾ ಗಾಯಗೊಂಡಿದ್ದು, ಅವರನ್ನು ತಕ್ಷಣ ಕೋಲಾರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.



