ಜೆಜೆಎಂ ಕಾಮಗಾರಿಗಳ ಪರಿಶೀಲನೆ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಸಂಚಾರ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್, ಸರ್ಕಾರದ ವಿವಿಧ ಕಾಮಗಾರಿಗಳು, ಯೋಜನೆಗಳ ಅನುಷ್ಠಾನ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು.

Advertisement

ಗುರುವಾರ ಶಿರಹಟ್ಟಿ ತಾಲೂಕು ಮಜ್ಜುರ ಹಾಗೂ ಮಾಚೇನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ಮಜ್ಜುರ, ಶಿವಾಜಿ ತಾಂಡಾ, ಮಾಚೇನಹಳ್ಳಿ, ತೆಗ್ಗಿನ ಭಾವನೂರ, ನವೆಭಾವನೂರ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು, ಸಂಪರ್ಕಗಳ ಗುಣಮಟ್ಟ, ಮೀಟರ್ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ವಿವರವಾದ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂರ್ಪಕದ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚಿಸಿದರು.

ಗುಣಮಟ್ಟದ ಕಾಮಗಾರಿ ಕೈಗೊಳ್ಳುವಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿ ಎಷ್ಟಿದೆಯೋ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದು, ಸದುಪಯೋಗ ಪಡೆದುಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಮೇಲೂ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ಭಾಗವಾಗಿ ಜವಾಬ್ದಾರಿಗಳನ್ನು ನಿಭಾಯಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕಲ್ಲದೇ ಪೂರ್ಣಗೊಂಡಿರುವ ಕಾಮಗಾರಿಗಳಿಂದ ಸದುಪಯೋಗ ಪಡೆದುಕೊಳ್ಳಬೆಕೇಂದರು.

ಈ ಸಂದರ್ಭದಲ್ಲಿ ಶಿರಹಟ್ಟಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ರಾಘವೇಂದ್ರ ದೊಡ್ಡಮನಿ, ಸಹಾಯಕ ಇಂಜಿನಿಯರ್ ಮಲ್ಲಿಕಾರ್ಜುನ ಪಾಟೀಲ, ವಿಭಾಗೀಯ ಅಧಿಕಾರಿ ಮುನ್ನಿ ಹರಕುನಿ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here