ಮೈಸೂರು:- ಎಣ್ಣೆ ಏಟಲ್ಲಿ ಪಬ್‌ನಲ್ಲಿ ಗಲಾಟೆ ಮಾಡಿದ್ದ ಇನ್ಸ್‌ಪೆಕ್ಟರ್ ಓರ್ವನನ್ನು ಸಸ್ಪೆಂಡ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Advertisement
ಎಸ್, ಮದ್ಯ ಸೇವಿಸಿ ಪಬ್‌ನಲ್ಲಿ ಗಾಲಾಟೆ ಮಾಡಿದ್ದ ಮೈಸೂರು ಸಿಸಿಬಿ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಚಾಮುಂಡಿಬೆಟ್ಟದ ತಪ್ಪಲಿನ ಜೆ.ಸಿ.ನಗರದ ಪಬ್‌ನಲ್ಲಿ ಕುಡಿದು ಟೈಟ್ ಆಗಿ ಪುನೀತ್ ಹಾಡು ಹಾಕುವಂತೆ ಗಲಾಟೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಪಬ್ ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ. ಇನ್ನೂ ಇತ್ತೀಚೆಗೆ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಗಲಾಟೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ವಿಡಿಯೋ ನೋಡಿ ಇದೀಗ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.