ರೈತರಿಗೆ ಸಿಹಿ ಸುದ್ದಿ: ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಸಿಹಿಹಂಚಿ ಸಂಭ್ರಮ!

0
Spread the love

ಕೊಪ್ಪಳ:-ಸತತ ಎರಡು ದಿನಗಳ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ ಆಗಿದ್ದು, ಸಿಹಿ ಹಂಚಿ ಸಂಭ್ರಮಿಸಲಾಗಿದೆ.

Advertisement

ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ.

ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಇದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹೆಚ್ಚಾಗಿ ರೈತರು ನಿಟ್ಟುಸಿರುಬಿಡುವಂತಾಗಿದೆ.

ಮೊದಲ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞಯ ನಾಯ್ಡು, ಇಂಜಿನಿಯರ್ ಹಾಗೂ ಸಿಬ್ಬಂದಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗೆ ಸಂಸದ ರಾಜಶೇಖರ್ ಹಿಟ್ನಾಳ ಅವರು ಸಿಹಿ ತಿನಿಸಿ ಸಂಭ್ರಮಿಸಿದರು.

ಸತತ ಎರಡು ದಿನಗಳಿಂದ ಅಳವಡಿಕೆ ಹರಸಾಹಸ ಮಾಡಿಲಾಗಿತ್ತು. ಆದ್ರೆ, ಇಂದು ಕತ್ತಲಾದರೂ ಸಹ ಸಿಬ್ಬಂದಿ ಲೈಟ್​ ಹಾಕಿಕೊಂಡೇ ಮೊದಲ ಹಂತದ ಸ್ಟಾಪ್​ ಲಾಗ್​​ ಗೇಟ್​ನ ಮೊದಲ ಎಲಿಮೆಂಟ್ ಅಳವಡಿಕೆಗೆ ಮುಂದಾಗಿದ್ದರು. ಇದೀಗ ಅದು ಸಕ್ಸಸ್ ಆಗಿದೆ.


Spread the love

LEAVE A REPLY

Please enter your comment!
Please enter your name here