ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸರ್ಕಾರದ ನಿರ್ದೇಶನದಂತೆ ಅ.23ರಂದು ತಹಸೀಲ್ದಾರ ಕಚೇರಿಯಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿಯನ್ನು ಆಚರಣೆ ಮಾಡಲಾಗುವುದು. ಜೊತೆಗೆ ಎಲ್ಲ ಇಲಾಖಾ ಕಚೇರಿಗಳಲ್ಲೂ ಸಹ ಜಯಂತಿ ಆಚರಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ ರಾಘವೇಂದ್ರರಾವ್ ಕೆ ಹೇಳಿದರು.
ಅವರು ಮಂಗಳವಾರ ಶಿರಹಟ್ಟಿಯ ತಹಸೀಲ್ದಾರ ಕಚೇರಿಯಲ್ಲಿ ಕಿತ್ತೂರ ಚನ್ನಮ್ಮ ಜಯಂತಿ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲೂ ಸಹ ಜಯಂತಿ ಆಚರಣೆ ಮಾಡಬೇಕು. ಈ ಬಗ್ಗೆ ಸುತ್ತೋಲೆಗಳನ್ನು ಹೊರಡಿಸಲಾಗುವುದು. ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗಿಯಾಗಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.
ತಾಲೂಕಾ ವೀರಶೈವ ಲಿಂಗಾಯತ ಸಂಘದ ಮುಖಂಡ ಎಸ್.ಎಸ್. ಪಾಟೀಲ ಮಾತನಾಡಿ, ತಾಲೂಕಿನ ಎಲ್ಲ ಪ್ರೌಢಶಾಲೆಗಳಲ್ಲಿ ಕಿತ್ತೂರ ಚನ್ನಮ್ಮಳ ಕುರಿತು ಪ್ರಬಂಧ ಸ್ಪರ್ಧೆಯನ್ನು ನಡೆಸಿ ಅದರಲ್ಲಿ ತಾಲೂಕಿಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕೆಲಸವಾಗಬೇಕೆಂದು ಹೇಳಿದರು.
ವೀರಶೈವ ಲಿಂಗಾಯತ ಸಂಘದ ತಾಲೂಕಾಧ್ಯಕ್ಷ ಬಿ.ಡಿ. ಪಲ್ಲೇದ, ಬಸವರಾಜ ಸಾಲಿ, ಅಶೋಕ ಬಳ್ಳಾರಿ, ತಿಪ್ಪಣ್ಣ ಕೊಂಚಿಗೇರಿ, ಅಶೋಕ ವರವಿ, ನಂದಾ ಪಲ್ಲೇದ, ಶಿವಪ್ಪ ಹದ್ಲಿ, ಬಸವರಾಜ ತುಳಿ, ಯಲ್ಲಪ್ಪ ಇಂಗಳಗಿ, ಬಸವರಾಜ ವಡವಿ, ಎಸ್.ಬಿ. ಹೊಸೂರ, ಅಶೋಕ ಹದ್ಲಿ, ಎಂ.ಎ. ಪಾಟೀಲ, ಬಸವರಾಜ ಚಿಕ್ಕತೋಟದ, ಮಹೇಶ ಮತ್ತೂರ, ಶರಣಪ್ಪ ಹೊಂಬಳ, ಚನ್ನವೀರಗೌಡ ಪಾಟೀಲ, ಹಾಲಪ್ಪ ದುಗ್ಗಾಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.