3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ: ದಿನೇಶ್ ಗುಂಡೂರಾವ್

0
Spread the love

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು,

Advertisement

ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್, ILI ಸಾರಿ ಕೇಸ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಕೊವಿಡ್ ಪ್ರಮಾಣ ಹೆಚ್ಚಿಸುತ್ತೇವೆ ಎಂದಿದ್ದಾರೆ.

3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ. 1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ RTPCR ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here