ವಿಜಯಸಾಕ್ಷಿ ಸುದ್ದಿ, ಗದಗ: 59ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯನ್ನು ಗದಗ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಸೋಮವಾರ ಆಚರಿಸಲಾಯಿತು.
ಜಿ.ಪಂ ಯೋಜನಾ ನಿರ್ದೇಶಕ ಎಮ್.ವಿ. ಚಳಗೇರಿ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಬೇಕು. 2022-2027ರವರೆಗಿನ 5 ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರ ನಾಡನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಸ್.ಎಸ್. ಕುರಿಯವರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತಾನಾಡಿ, ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಂಪೂರ್ಣ ಸಾಕ್ಷರ ಗ್ರಾಮ ಪಂಚಾಯತ ಸಾಕ್ಷರತಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಲಿಂಕ್ ಡಾಕ್ಯೂಮೆಂಟ್ ಜನಶಿಕ್ಷಣ ನಿಲಯ ಯೋಜನೆಯಡಿ ಮೂಲ ಸಾಕ್ಷರತಾ ಕಾರ್ಯಕ್ರಮ ಮತ್ತು ರಾಷ್ಟç ಮಟ್ಟದ ನವಭಾರತ ಸಾಕ್ಷರತಾ ಕಾರ್ಯಕ್ರಮಗಳನ್ನು ಜಿಲ್ಲೆಯ ಶಿಕ್ಷಣ ಅಧಿಕಾರಿಗಳು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಡಿ.ವೈ.ಪಿ.ಸಿ ಸರ್ವ ಶಿಕ್ಷಣ ಅಭಿಯಾನ, ಎಮ್.ಹೆಚ್. ಕಂಬಳಿ ಮಾತನಾಡಿ, ವಿದ್ಯಾವಂತರು ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಬೇಕು. ಜನರು ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಒಂದು ಊರುಗೋಲು ಇದ್ದಂತೆ ಎಂದು ಹೇಳಿದರು.
ಶಾಸ್ತ್ರೀಜಿ ಬಿ.ಎಡ್ ಕಾಲೇಜಿನ ಉಪನ್ಯಾಸಕ ರಾಜು ಕೇರೂರ ಹಾಗೂ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ವಿವಿಧ ಸಾಕ್ಷರತಾ ಕಾರ್ಯಕ್ರಮಗಳ ಬೋಧಕರು ಪಾಲ್ಗೊಂಡಿದ್ದರು. ಡಯಟ್‌ದ ಪ್ರಾಚಾರ್ಯರಾದ ಮಂಗಳಾ ಬಿ.ತಾಪಸ್ಕರ ಸಾಕ್ಷರತಾ ಪ್ರಮಾಣ ವಚನವನ್ನು ಬೋಧಿಸಿದರು.
ಹಿರಿಯ ಉಪನ್ಯಾsಸಕ ಜಿ.ಎಮ್. ಮುಂದಿನಮನಿ, ಬಿ.ಎಫ್. ಅರವಟಗಿ, ಜೆ.ಎ. ಬಾವಿಕಟ್ಟಿ, ಎಸ್.ಪಿ. ಪ್ರಭಯ್ಯನಮಠ, ಎಸ್.ಆರ್. ನದಾಫ್, ಎಸ್.ಬಿ. ಬನ್ನಿಕಲ್, ಜೆ. ಹುಲಗೇರಿ, ಜಿ.ಡಿ. ದಾಸರ, ಸೇರಿದಂತೆ ಗ್ರಾಮೀಣ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ದೈಹಿಕ ಶಿಕ್ಷಕ ಎಸ್. ಮುಳಗುಂದ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅಶೋಕ ಹಾದಿ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕಿ ಪಿ.ಡಿ. ಮಂಗಳೂರ ವಂದಿಸಿದರು.


