IPL 2025: ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್: CSK ವಿರುದ್ಧದ ಪಂದ್ಯಕ್ಕೆ ನಿಷೇಧ!

0
Spread the love

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಎದುರಾಗಿದ್ದು, CSK ವಿರುದ್ಧದ ಪಂದ್ಯಕ್ಕೆ ನಿಷೇಧ ಮಾಡಲಾಗಿದೆ.

Advertisement

ಮಾರ್ಚ್ 22 ರಿಂದ ಶುರುವಾಗಲಿರುವ IPL 2025ರ ಟೂರ್ನಿಯ ಮೊದಲ ಪಂದ್ಯದಲ್ಲಿ KKR ಮತ್ತು RCB ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಲಿದೆ. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ.

ಏಕೆಂದರೆ ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್​​ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಆಡುವ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಮ್ಯಾಚ್​​ನಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here