2025ರ IPL ನಲ್ಲಿ ಆರ್ಸಿಬಿಗೆ ರೀ ಎಂಟ್ರಿ ಕೊಟ್ಟ ಕನ್ನಡಿಗ ದೇವದತ್ ಪಡಿಕ್ಕಲ್ ಗೆ ಶಾಕಿಂಗ್ ನ್ಯೂಸ್ ಎದುರಾಗಿದೆ.
2025 ರ IPL ನಲ್ಲಿ ಸ್ಟಾರ್ ಕನ್ನಡಿಗ ದೇವದತ್ ಪಡಿಕ್ಕಲ್ ಆರ್ಸಿಬಿಗೆ ರೀ ಎಂಟ್ರಿ ನೀಡಿದ್ದಾರೆ. ಇವರನ್ನು RCB 2 ಕೋಟಿಗೆ ಖರೀದಿಸಿದೆ. ಆದರೆ ಅವರಿಗೆ ಆಡುವ ಅವಕಾಶ ತುಂಬಾ ಕಡಿಮೆ ಎಂಬುದೇ ಅಚ್ಚರಿ. ಇದಕ್ಕೆ ಕಾರಣ ಅವರ ಕಳಪೆ ಫಾರ್ಮ್. ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನೀಡಿದ ಪ್ರದರ್ಶನ ಅಷ್ಟಕಷ್ಟೇ. RCB ಮಿಡಲ್ ಆರ್ಡರ್ ಬ್ಯಾಟರ್ ಆಗಿ ಲಿಯಾಮ್ ಲಿವಿಂಗ್ಸ್ಟೋನ್, ಟಿಮ್ ಡೇವಿಡ್ ಮತ್ತು ಕೃನಾಲ್ ಪಾಂಡ್ಯ ಅವರಂತಹ ಬಲಿಷ್ಠ ಬ್ಯಾಟ್ಸ್‌ಮನ್‌ಗಳ ದಂಡು ಇದೆ. ಇಂತಹ ಪರಿಸ್ಥಿತಿಯಲ್ಲಿ ಪಡಿಕ್ಕಲ್ಗೆ ಅವಕಾಶ ಸಿಗೋದು ಕಷ್ಟ ಎನ್ನಲಾಗುತ್ತಿದೆ.
ಇನ್ನೂ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಮುಕ್ತಾಯಗೊಂಡಿದೆ. ಈ ಬಾರಿ ಹರಾಜಿನಲ್ಲಿ ಆರ್ಸಿಬಿ ಬರೋಬ್ಬರಿ 19 ಆಟಗಾರರನ್ನು ಖರೀದಿ ಮಾಡಿದೆ. ಆರ್ಸಿಬಿ ಈ ಮೂಲಕ ಮುಂದಿನ ಸೀಸನ್ಗೆ 22 ಆಟಗಾರರ ಬಲಿಷ್ಠ ತಂಡ ರೂಪಿಸಿದೆ.