IPL 2025: ನನಗೆ ಚೆನ್ನೈ ತಂಡದ ಭಾಗವಾಗಲು ಇಷ್ಟ: RCB ಆಟಗಾರನ ಹೇಳಿಕೆ!

0
Spread the love

RCB ತಂಡದ ವಿಕೆಟ್ ಕೀಪರ್ ಅನೂಜ್ ರಾವತ್ ಅವರು ಚೆನ್ನೈ ತಂಡದ ಪರ ಆಡಲು ಇಂಗಿತ ವ್ಯಕ್ತಪಡಿಸಿದ್ದಾರೆ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 ರಿಂದ ಆರ್​ಸಿಬಿ ತಂಡದಲ್ಲಿರುವ ವಿಕೆಟ್ ಕೀಪರ್ ಬ್ಯಾಟರ್ ಅನೂಜ್ ರಾವತ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ರಾವತ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಈ ಬಾರಿ ಅನೂಜ್ ರಾವತ್ ರಾಯಲ್ ಬಳಗದಿಂದ ಹೊರಬೀಳುವುದು ಬಹುತೇಕ ಖಚಿತ.

ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಮಾಡಿಕೊಳ್ಳದಿದ್ದರೆ ಮುಂದೇನು ಎಂಬ ಪ್ರಶ್ನೆಯೊಂದನ್ನು ಸ್ಪೋರ್ಟ್ಸ್​ ಯಾರಿ ಚಾನೆಲ್​ ಅನೂಜ್ ರಾವತ್ ಅವರ ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್​ಸಿಬಿ ಬ್ಯಾಟರ್, ನನಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

ಆರ್​ಸಿಬಿ ಇಲ್ಲದಿದ್ದರೆ, ನಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಬಯಸುತ್ತೇನೆ. ಏಕೆಂದರೆ ಸಿಎಸ್​ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಅವರು ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಲ್ಲದೆ ಎಲ್ಲಾ ಆಟಗಾರರು ಅವರ ಬಗ್ಗೆ ಮಾತನಾಡುತ್ತಿರುತ್ತಾರೆ. ಹೀಗಾಗಿ ನನಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ಅನೂಜ್ ರಾವತ್ ಹೇಳಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here