HomeSports NewsIPL 2025: ಆರ್ ಸಿಬಿಯಲ್ಲಿ ಎಲ್ಲವೂ ಸರಿಯಿಲ್ವಾ!? ಕೊಹ್ಲಿ ಬೇಸರ ಯಾರ ಮೇಲೆ?

IPL 2025: ಆರ್ ಸಿಬಿಯಲ್ಲಿ ಎಲ್ಲವೂ ಸರಿಯಿಲ್ವಾ!? ಕೊಹ್ಲಿ ಬೇಸರ ಯಾರ ಮೇಲೆ?

For Dai;y Updates Join Our whatsapp Group

Spread the love

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ 9 ಪಂದ್ಯದಲ್ಲಿ 6 ಮ್ಯಾಚ್ ಗಳಲ್ಲಿ ಗೆದ್ದು ಮೂರರಲ್ಲಿ ಸೋಲು ಕಂಡಿದೆ. ಆದರೆ ಆರ್ ಸಿಬಿಯಲ್ಲಿ ಎಲ್ಲವೂ ಸರಿಇಲ್ವಾ ಎಂಬ ಪ್ರಶ್ನೆ ಜೋರಾಗಿ ಕೇಳಿ ಬಂದಿದೆ.

ಎಸ್, ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವನ್ನು 194 ರನ್​ಗಳಿಗೆ ನಿಯಂತ್ರಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಈ ಮೂಲಕ ಆರ್​ಸಿಬಿ ಪಡೆ 11 ರನ್​ಗಳ ರೋಚಕ ಗೆಲುವು ದಾಖಲಿಸಿದೆ. ಈ ಗೆಲುವಿನ ಹೊರತಾಗಿಯೂ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಂದ್ಯದ ನಡುವೆ ವಿರಾಟ್ ಕೊಹ್ಲಿ ನೀಡಿದ ರಿಯಾಕ್ಷನ್. ಅತ್ಯುತ್ತಮ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ವಿರಾಟ್ ಕೊಹ್ಲಿಯೊಂದಿಗೆ ಬೌಂಡರಿ ಲೈನ್​ನಲ್ಲಿ ನಿಂತು ಚರ್ಚಿಸಿದ್ದರು. ಈ ವೇಳೆ ದಿನೇಶ್ ಕಾರ್ತಿಕ್ ಕೆಲ ಸಲಹೆಗಳನ್ನು ಸಹ ನೀಡಿದ್ದಾರೆ. ಆದರೆ ಈ ಸಲಹೆಗಳ ವೇಳೆ ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವುದು ಕಾಣಬಹುದು. ಮೇಲ್ನೋಟಕ್ಕೆ ನನ್ನನ್ನು ಬಿಟ್ಟು ಬಿಡು ಎಂಬಾರ್ಥದಲ್ಲಿ ಕೈ ಮುಗಿಯುತ್ತಿರುವ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ನಾಯಕ ರಜತ್ ಪಾಟಿದಾರ್ ತನ್ನ ಸಲಹೆಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬಾರ್ಥದಲ್ಲಿ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ ಬಳಿ ದೂರುತ್ತಿರುವುದು ಕಂಡು ಬಂದಿತ್ತು. ಇದೀಗ ಮತ್ತೊಮ್ಮೆ ಬೌಂಡರಿ ಲೈನ್​ನಲ್ಲಿ ದಿನೇಶ್ ಕಾರ್ತಿಕ್ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾಗ, ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವ ಫೋಟೋಗಳು ವೈರಲ್ ಆಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!