HomeSports NewsIPL 2025 LSG Vs KKR: ರೋಚಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಲಕ್ನೋ!

IPL 2025 LSG Vs KKR: ರೋಚಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಲಕ್ನೋ!

For Dai;y Updates Join Our whatsapp Group

Spread the love

ಈಡನ್ ಗಾರ್ಡನ್ ನಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಲಕ್ನೋ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ, ಪೂರನ್ ಮತ್ತು ಮಾರ್ಶ್ ಬ್ಯಾಟಿಂಗ್ ಸಹಾಯದಿಂದ ಮೂರು ವಿಕೆಟ್ ನಷ್ಟಕ್ಕೆ 238 ರನ್ ಮಾಡಿದರೆ, ಕೆಕೆಆರ್ ತಂಡವು ಏಳು ವಿಕೆಟ್ ಗೆ 234 ರನ್ ಮಾಡಿ ಸೋಲು ಕಂಡಿತು.

ನಾಯಕ ಅಜಿಂಕ್ಯ ರಹಾನೆ ಅವರ ಅರ್ಧಶತಕ ಮತ್ತು ಕೊನೆಯಲ್ಲಿ ರಿಂಕು ಸಿಂಗ್ ಅವರ ಅದ್ಭುತ ಬ್ಯಾಟಿಂಗ್ ಹೊರತಾಗಿಯೂ, ಕೋಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ ಮೂರು ವಿಕೆಟ್‌ಗಳಿಗೆ 238 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕೆಕೆಆರ್ ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 234 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

ಕೊನೆಯ ಓವರ್‌ನಲ್ಲಿ ಕೆಕೆಆರ್ ಗೆಲ್ಲಲು 24 ರನ್‌ಗಳು ಬೇಕಾಗಿದ್ದವು. ಈ ಓವರ್​ನಲ್ಲಿ ರಿಂಕು ಸಿಂಗ್ ಮತ್ತು ಹರ್ಷಿತ್ ರಾಣಾ ಕೇವಲ 19 ರನ್‌ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಲಕ್ನೋ ತಂಡವು ಕೋಲ್ಕತ್ತಾ ತಂಡವನ್ನು 4 ರನ್‌ಗಳಿಂದ ಸೋಲಿಸಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!