HomeSports NewsIPL 2025: Qualifier 2 ಗೆ ಲಗ್ಗೆಯಿಟ್ಟ MI..ಹೀನಾಯವಾಗಿ ಸೋತು ಟೂರ್ನಿಗೆ ವಿದಾಯ ಹೇಳಿದ ಗುಜರಾತ್!

IPL 2025: Qualifier 2 ಗೆ ಲಗ್ಗೆಯಿಟ್ಟ MI..ಹೀನಾಯವಾಗಿ ಸೋತು ಟೂರ್ನಿಗೆ ವಿದಾಯ ಹೇಳಿದ ಗುಜರಾತ್!

For Dai;y Updates Join Our whatsapp Group

Spread the love

ಶುಕ್ರವಾರ ನಡೆದ IPL 2025ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ತಂಡ ಮಣಿಸಿ Qualifier 2 ಗೆ ಲಗ್ಗೆಯಿಟ್ಟಿದೆ. ಚಂಡೀಗಢದ ಮುಲ್ಲನ್ ಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 229 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ಗುಜರಾತ್ ಟೈಟನ್ಸ್ ತಂಡ ಹೀನಾಯ ಸೋಲುಕಂಡಿತು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯ ಪ್ರಶಸ್ತಿ ರೇಸ್ ನಿಂದ ಹೊರಬಿತ್ತು,

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ರಿಯಾನ್ ರಿಕಲ್ಟನ್ ಬದಲಾಗಿ ಕಣಕ್ಕಿಳಿದ ಜಾನಿ ಬೈರ್ ಸ್ಟೋ ಅಬ್ಬರದ ಆರಂಭ ಒದಗಿಸಿದರು. ರೋಹಿತ್ ಶರ್ಮಾಗೆ ಕೂಡ ಎರಡು ಬಾರಿ ಗುಜರಾತ್ ಟೈಟಾನ್ಸ್ ಫೀಲ್ಡರ್ ಗಳು ಜೀವದಾನ ನೀಡಿದ್ದು ಮುಂಬೈ ಇಂಡಿಯನ್ಸ್‌ಗೆ ವರವಾಯಿತು.

ಬೈರ್ ಸ್ಟೋ 22 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 47 ರನ್ ಗಳಿಸಿ ಔಟಾದರೆ, ರೋಹಿತ್ ಶರ್ಮಾ 50 ಎಸೆತಗಳಲ್ಲಿ 9 ಬೌಂಡರಿ 4 ಸಿಕ್ಸರ್ ಸಹಿತ 81 ರನ್ ಗಳಿಸಿ ಮಿಂಚಿದರು. ಸೂರ್ಯಕುಮಾರ್ ಯಾದವ್ 20 ಎಸೆತಗಳಲ್ಲಿ 33 ರನ್ ಗಳಿಸಿದರೆ, ತಿಲಕ್ ವರ್ಮಾ 11 ಎಸೆತಗಳಲ್ಲಿ 25 ರನ್ ಗಳಿಸಿದರು. ನಾಯಕ ಹಾರ್ದಿಕ್ ಪಾಂಡ್ಯ ಕೊನೆಯಲ್ಲಿ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ ಅಜೇಯ 22 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ 228 ರನ್‌ಗಳ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು.

229 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್‌ಗೆ ಮೊದಲ ಓವರ್ ನಲ್ಲೇ ದೊಡ್ಡ ಆಘಾತ ಎದುರಾಯಿತು. ನಾಯಕ ಶುಭಮನ್ ಗಿಲ್ ಕೇವಲ 1 ರನ್ ಗಳಿಸಿ ಔಟಾದರು. ಬಳಿಕ ಸಾಯಿ ಸುದರ್ಶನ್ ಮತ್ತು ಕುಸಾಲ್ ಮೆಂಡಿಸ್ ಎರಡನೇ ವಿಕೆಟ್‌ಗೆ 64 ರನ್ ಕಲೆಹಾಕಿದರು. ಉತ್ತಮವಾಗಿ ಆಡುತ್ತಿದ್ದ ಕುಸಾಲ್ ಮೆಂಡಿಸ್ ಹಿಟ್ ವಿಕೆಟ್ ಆಗಿದ್ದು ಮತ್ತೊಂದು ಹೊಡೆತವಾಯಿತು. ಬಳಿಕ ಬಂದ ವಾಷಿಂಗ್ಟನ್ ಸುಂದರ್ ಜೊತೆಗೂಡಿದ ಸಾಯಿ ಸುದರ್ಶನ್ 4ನೇ ವಿಕೆಟ್‌ಗೆ 84 ರನ್ ಕಲೆಹಾಕಿದರು. ವಾಷಿಂಗ್ಟನ್ ಸುಂದರ್ 24 ಎಸೆತಗಳಲ್ಲಿ 48 ರನ್ ಗಳಿಸಿದರೆ, ಸಾಯಿಸುದರ್ಶನ್ 49 ಎಸೆತಗಳಲ್ಲಿ 10 ಬೌಂಡರಿ 1 ಸಿಕ್ಸರ್ ಸಹಿತ 80 ರನ್ ಗಳಿಸಿ ಔಟಾದರು.

ಶೆರ್ಫಾನೆ ರುಥರ್ ಫೋರ್ಡ್ 15 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಶಾರುಖ್ ಖಾನ್ ಮತ್ತು ರಾಹುಲ್ ತೆವಾಟಿಯಾ ಇದ್ದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಅಂತಿಮವಾಗಿ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!