IPL 2025: ಡೆಲ್ಲಿಗೆ ಶರಣಾದ ಪಂಜಾಬ್: RCB ಹಾದಿ ಮತ್ತಷ್ಟು ಸುಗಮ!

0
Spread the love

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಸೋಲು ಅನುಭವಿಸಿದೆ.

Advertisement

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 206 ರನ್​ ಕಲೆಹಾಕಿದರೆ, ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಡೆಲ್ಲಿ ಪಡೆ 6 ವಿಕೆಟ್​ಗಳ ಜಯ ಸಾಧಿಸಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಯ ಸಾಧಿಸುತ್ತಿದ್ದಂತೆ, ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಕ್ವಾಲಿಫೈಯರ್ ಹಾದಿ ಸುಗಮವಾಗಿದೆ. ಅಂದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬೇಕಿದ್ದರೆ, ಮುಂದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಸಾಕು ಎನ್ನಲಾಗಿದೆ.

ಒಂದು ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ, 19 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರಲಿದೆ. ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ, ಆರ್​ಸಿಬಿ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಇದಕ್ಕಾಗಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನೆಟ್ ರನ್ ರೇಟ್ ಅನ್ನು ಗುರಿಯಾಗಿಸಿ ಅಮೋಘ ಗೆಲುವು ದಾಖಲಿಸಬೇಕಾಗುತ್ತದೆ.


Spread the love

LEAVE A REPLY

Please enter your comment!
Please enter your name here