IPL 2025: ಮಳೆಯಿಂದ ರದ್ದಾದ RCB ಮ್ಯಾಚ್: ಟೂರ್ನಿಯಿಂದ ಹೊರಬಿದ್ದ KKR!

0
Spread the love

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಿಗದಿಯಾಗಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯ ಭಾರೀ ಮಳೆಯಿಂದ ರದ್ದಾಗಿದೆ.

Advertisement

ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಕ್ಕಿದೆ. ಕೆಕೆಆರ್ ತಂಡ 12 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು ಒಂದು ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ.

ಇನ್ನು ಆರ್ ಸಿಬಿ ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈಗ ಒಂದು ಪಂದ್ಯ ರದ್ದಾಗಿ 17 ಅಂಕ ಪಡೆಯುವ ಮೂಲಕ ಟೇಬಲ್ ಟಾಪರ್ ಆಗಿದ್ದು, ಪ್ಲೇ ಆಫ್ ಸ್ಥಾನ ಖಾತ್ರಿಯಾಗಿದೆ.


Spread the love

LEAVE A REPLY

Please enter your comment!
Please enter your name here