IPL 2025: ನಾವು ನಿರೀಕ್ಷೆಗಳಿಗೆ ತಕ್ಕಂತೆ ಬೌಲಿಂಗ್ ಮಾಡಲಿಲ್ಲ ಎಂಬುದೇ ಸತ್ಯ: ಶ್ರೇಯಸ್ ಅಯ್ಯರ್

0
Spread the love

ಐಪಿಎಲ್​ನ 27ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಮೋಘ ಗೆಲುವು ದಾಖಲಿಸಿದೆ. ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಮೊಹಮ್ಮದ್ ಶಮಿ ಅವರ ಈ ದುಬಾರಿ ಓವರ್​ ಹೊರತಾಗಿಯೂ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿರುವುದು ವಿಶೇಷ. ಶತಕದ ನೆರವಿನೊಂದಿಗೆ ಸನ್​ರೈಸರ್ಸ್​ ಹೈದರಾಬಾದ್ ತಂಡವು 18.3 ಓವರ್​ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

Advertisement

ಇನ್ನೂ ಈ ಸೋಲಿನ ಬಳಿಕ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ನಿಜವಾಗಿಯೂ ಹೇಳಬೇಕೆಂದರೆ, ಇದು ಅತ್ಯುತ್ತಮ ಮೊತ್ತವಾಗಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ತಂಡವು 2 ಓವರ್​ಗಳು ಬಾಕಿ ಇರುವಾಗಲೇ ಚೇಸ್ ಮಾಡಿರುವುದು ನೋಡಿದ್ರೆ ನಿಜಕ್ಕೂ ನನಗೆ ನಗು ಬರುತ್ತಿದೆ ಎಂದರು.

ಒಂದು ವೇಳೆ ನಾವು ಕೆಲ ಕ್ಯಾಚ್​ಗಳನ್ನು ಹಿಡಿದಿದ್ದರೆ ಪಂದ್ಯದಲ್ಲಿ ಕಂಬ್ಯಾಕ್ ಮಾಡಬಹುದಿತ್ತು. ಆದರೆ ಅಭಿಷೇಕ್ ಶರ್ಮಾ ಅದೃಷ್ಟವಂತ. ಹೀಗೆ ಸಿಕ್ಕ ಜೀವದಾನಗಳನ್ನು ಬಳಸಿಕೊಂಡ ಅಭಿಷೇಕ್ ಅತ್ಯುತ್ತಮ ಇನಿಂಗ್ಸ್ ಆಡಿದರು ಎಂದು ಅಯ್ಯರ್ ಹೇಳಿದ್ದಾರೆ.

ಇನ್ನು ನಮ್ಮ ಸೋಲಿನ ಬಗ್ಗೆ ಸಂಕ್ಷಿಪ್ತವಾಗಿ ಹೇಳುವುದಾದರೆ, ನಾವು ನಿರೀಕ್ಷೆಗಳಿಗೆ ತಕ್ಕಂತೆ ಬೌಲಿಂಗ್ ಮಾಡಲಿಲ್ಲ ಎಂಬುದೇ ಸತ್ಯ. ನಾವು ಡ್ರಾಯಿಂಗ್ ಬೋರ್ಡ್‌ಗೆ ಹೋಗಿ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕಾಗಿತ್ತು. ಅಭಿಷೇಕ್ ಮತ್ತು ಹೆಡ್ ನಡುವಿನ ಆರಂಭಿಕ ಪಾಲುದಾರಿಕೆ ಅದ್ಭುತವಾಗಿತ್ತು.

ಸನ್​ರೈಸರ್ಸ್ ಹೈದರಾಬಾದ್ ಓಪನರ್​ಗಳು ನಮಗೆ ಹೆಚ್ಚಿನ ಅವಕಾಶವನ್ನೇ ನೀಡಲಿಲ್ಲ. ಇದರ ನಡುವೆ ಲಾಕಿ ಫರ್ಗುಸನ್ ಗಾಯಗೊಂಡು ಹೊರನಡೆದಿದ್ದು ಕೂಡ ನಮ್ಮ ಪಾಲಿಗೆ ಮುಳುವಾಯಿತು. ಒಂದು ವೇಳೆ ಅವರಿದ್ದಿದ್ದರೆ ಒಂದೆರಡು ವಿಕೆಟ್​ಗಳು ಲಭಿಸುತ್ತಿದ್ದವು ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here