ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಕಪ್ ಗೆದ್ದ ಆರ್‌ಸಿಬಿ ತಂಡಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.
Advertisement
ಅದರಂತೆ ಉದ್ಯಮಿ ವಿಜಯ್ ಮಲ್ಯ ಅವರು ಕೂಡ ಕಪ್ ಗೆದ್ದ ಆರ್ ಸಿಬಿ ತಂಡಕ್ಕೆ ಶುಭ ಕೋರಿದ್ದಾರೆ. 18 ವರ್ಷಗಳ ನಂತರ ಆರ್‌ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಪಂದ್ಯಾವಳಿ ಅದ್ಭುತ ಅಭಿಯಾನ ಆಗಿತ್ತು. ಈ ಸಲ ಕಪ್ ನಮ್ದೆ !! ಅಭಿನಂದನೆಗಳು ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನೂ ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ.