ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, 2025ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಆಡಿರುವ 5 ಪಂದ್ಯದಲ್ಲಿ ಕೇವಲ 2 ರಲ್ಲಿ ಸೋಲು ಕಂಡು ಮೂರರಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ.
ಅದರಂತೆ RCB ತಂಡದ ಗ್ರೀನ್ ಜೆರ್ಸಿ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಅದರಂತೆ ಏಪ್ರಿಲ್ 13 ರಂದು ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ತಂಡ ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಜೈಪುರ್ನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.
2011 ರಿಂದ ಐಪಿಎಲ್ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್ಸಿಬಿ ಪ್ರತಿ ಸೀಸನ್ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಇದರ ಮೂಲ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು. ಅದರಲ್ಲೂ ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.