HomeSports NewsIPL 2026: RCB ಟಿಕೆಟ್ ಹಂಟ್ ಶುರು! ಚಿನ್ನಸ್ವಾಮಿಯಲ್ಲಿ ಪಂದ್ಯಗಳಿಗೆ ಭಾರೀ ಕ್ರೇಜ್ – ಮೆಟ್ರೋ...

IPL 2026: RCB ಟಿಕೆಟ್ ಹಂಟ್ ಶುರು! ಚಿನ್ನಸ್ವಾಮಿಯಲ್ಲಿ ಪಂದ್ಯಗಳಿಗೆ ಭಾರೀ ಕ್ರೇಜ್ – ಮೆಟ್ರೋ ಫ್ರೀ!

For Dai;y Updates Join Our whatsapp Group

Spread the love

ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ ಕೌಂಟ್‌ಡೌನ್ ಆರಂಭವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಲ್ಲಿ ಟಿಕೆಟ್ ಕ್ರೇಜ್ ಗರಿಗೆದರಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತವರಿನ ಪಂದ್ಯಗಳಿಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವುದರಿಂದ, ಟಿಕೆಟ್‌ಗಳಿಗೆ ಭಾರೀ ಬೇಡಿಕೆ ನಿರೀಕ್ಷೆಯಾಗಿದೆ.

ಆರ್‌ಸಿಬಿ ಮ್ಯಾನೆಜ್‌ಮೆಂಟ್ ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ಟಿಕೆಟ್ ಮಾರಾಟ ಪ್ರಕ್ರಿಯೆ ಆರಂಭಿಸುವುದಾಗಿ ಘೋಷಿಸಿದೆ. ಟಿಕೆಟ್‌ಗಳು ಕೇವಲ ಆರ್‌ಸಿಬಿ ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್‌ನಲ್ಲಿ ಮಾತ್ರ ಲಭ್ಯವಿರಲಿವೆ. ಮೊದಲ ಹಂತದಲ್ಲಿ ಸದಸ್ಯರಿಗೆ ಅವಕಾಶ ನೀಡಲಾಗುತ್ತದೆ, ನಂತರ ಸಾರ್ವಜನಿಕರಿಗೆ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಮಾರ್ಚ್ 28ರಂದು ಚಿನ್ನಸ್ವಾಮಿ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಮೊದಲ ಪಂದ್ಯ ಆಡಲಿದ್ದು, ಏಪ್ರಿಲ್ 5ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಪಂದ್ಯ ವೀಕ್ಷಣೆಗೆ ಬರುವ ಅಭಿಮಾನಿಗಳಿಗೆ ಈ ಬಾರಿ ವಿಶೇಷ ಸೌಲಭ್ಯ – RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ! ಈ ಕುರಿತು ಸಿದ್ಧತೆಗಳು ನಡೆಯುತ್ತಿವೆ.

ಇತ್ತೀಚೆಗೆ ನಡೆದ ಘಟನೆಗಳ ಹಿನ್ನೆಲೆಯಲ್ಲಿ ಸುರಕ್ಷತೆ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಗೇಟ್‌ಗಳು, ಎಂಟ್ರಿ-ಎಕ್ಸಿಟ್ ಮಾರ್ಗಗಳು ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ವಿಶೇಷ ಪ್ಲಾನ್ ಸಿದ್ಧಪಡಿಸಲಾಗಿದೆ. ಗರುಡಮಾಲ್, ಸೇಂಟ್ ಜೋಸೆಫ್ ಶಾಲೆಗಳು ಮತ್ತು ಫ್ರೀಡಂಪಾರ್ಕ್‌ನಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಇರಲಿದೆ.

ಮೂರನೇ ವ್ಯಕ್ತಿಯ ವೆಬ್‌ಸೈಟ್‌ಗಳಿಂದ ಟಿಕೆಟ್ ಖರೀದಿಸಬೇಡಿ ಎಂದು ಆರ್‌ಸಿಬಿ ಎಚ್ಚರಿಕೆ ನೀಡಿದ್ದು, ಕಳೆದ ವರ್ಷದ ₹2,300 ರಿಂದ ₹42,000ರವರೆಗೆ ಟಿಕೆಟ್ ದರ ಇರಬಹುದೆಂಬ ನಿರೀಕ್ಷೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!