HomeSports NewsIPL 2026: ಸಾಲ್ಟ್–ಕೊಹ್ಲಿ–ಪಾಟಿದಾರ್ ಅಬ್ಬರ; ಮುಂಬೈ ವಿರುದ್ಧ ಆರ್‌ಸಿಬಿಗೆ 18 ರನ್‌ಗಳ ಜಯ!

IPL 2026: ಸಾಲ್ಟ್–ಕೊಹ್ಲಿ–ಪಾಟಿದಾರ್ ಅಬ್ಬರ; ಮುಂಬೈ ವಿರುದ್ಧ ಆರ್‌ಸಿಬಿಗೆ 18 ರನ್‌ಗಳ ಜಯ!

For Dai;y Updates Join Our whatsapp Group

Spread the love

ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ಪಂದ್ಯ ಅಭಿಮಾನಿಗಳಿಗೆ ರಸದೌತಣ ನೀಡಿತು.

ಉಭಯ ತಂಡಗಳ ಆಕ್ರಮಣಕಾರಿ ಬ್ಯಾಟಿಂಗ್ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ ಪೇರಿಸಿತು. ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಮೊದಲ ವಿಕೆಟ್‌ಗೆ 120 ರನ್‌ಗಳ ಭರ್ಜರಿ ಜೊತೆಯಾಟ ನೀಡಿದರು. ಸಾಲ್ಟ್ 36 ಎಸೆತಗಳಲ್ಲಿ 78 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಕೊಹ್ಲಿ 50 ರನ್‌ಗಳ ಅರ್ಧಶತಕ ಬಾರಿಸಿದರು.

ಬಳಿಕ ನಾಯಕ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 53 ರನ್‌ಗಳ ಸಿಡಿಲಾಟ ನಡೆಸಿ ಮುಂಬೈ ಬೌಲರ್‌ಗಳನ್ನು ಕಾಡಿದರು. ಅಂತಿಮವಾಗಿ ಟಿಮ್ ಡೇವಿಡ್ ಅಜೇಯ 34 ರನ್‌ಗಳ ಕೊಡುಗೆ ನೀಡಿ ತಂಡದ ಮೊತ್ತವನ್ನು 240ಕ್ಕೆ ಏರಿಸಿದರು.

241 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭ ಪಡೆದರೂ, ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ನಿವೃತ್ತರಾಗಿದ್ದು ತಂಡಕ್ಕೆ ಹಿನ್ನಡೆಯಾಯಿತು. ರಯಾನ್ ರಿಕಲ್ಟನ್ 37 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 33 ರನ್‌ಗಳ ಕೊಡುಗೆ ನೀಡಿದರು.

ನಂತರ ಹಾರ್ದಿಕ್ ಪಾಂಡ್ಯ 40 ರನ್‌ಗಳ ಸ್ಫೋಟಕ ಆಟವಾಡಿದರೂ, ನಿರಂತರ ವಿಕೆಟ್ ನಷ್ಟದಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿತು. ಕೊನೆಯಲ್ಲಿ ಶೆರ್ಫೇನ್ ರುದರ್ಫೋರ್ಡ್ 31 ಎಸೆತಗಳಲ್ಲಿ ಅಜೇಯ 71 ರನ್‌ಗಳ ಹೋರಾಟ ಪ್ರದರ್ಶಿಸಿದರೂ, ತಂಡವನ್ನು ಗೆಲುವಿನ ದಡ ತಲುಪಿಸಲು ಸಾಧ್ಯವಾಗಲಿಲ್ಲ.

ಇದರೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ 18 ರನ್‌ಗಳ ಅಂತರದಲ್ಲಿ ಸೋಲು ಕಂಡಿತು. ಆರ್‌ಸಿಬಿ ಈ ಗೆಲುವಿನೊಂದಿಗೆ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!