ಬೆಳಗಾವಿ: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರೀ ನಷ್ಟವಾದ ಹಿನ್ನೆಲೆ ಯುವಕ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂದಿರಾನಗರದಲ್ಲಿ ನಡೆದಿದೆ. ಅನಿಲ ರಾಮು ಜಾದವ್(34) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು,
Advertisement
ಐಪಿಎಲ್‌ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ. ಐಪಿಎಲ್ ಬೆಟ್ಟಿಂಗ್‌ನಲ್ಲಿ ಬಾರಿ ನಷ್ಟವಾದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಯುವಕ ಸಾವು ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.