ಬೆಳಗಾವಿ: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರೀ ನಷ್ಟವಾದ ಹಿನ್ನೆಲೆಯಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂದಿರಾನಗರದಲ್ಲಿ ನಡೆದಿದೆ.
Advertisement
ಅನಿಲ ರಾಮು ಜಾದವ್(34) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಐಪಿಎಲ್‌ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ. ಐಪಿಎಲ್ ಬೆಟ್ಟಿಂಗ್‌ನಲ್ಲಿ ಬಾರಿ ನಷ್ಟವಾದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಯುವಕನ ಸಾವಿನ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.