ಬೆಂಗಳೂರು:- ಐಪಿಎಸ್ ಅಧಿಕಾರಿ ರೂಪಾ ಡಿ ಮೌದ್ಗಿಲ್ ವಿರುದ್ಧ ಕಳ್ಳತನ ಆರೋಪ ಮಾಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ದಾಖಲೆ ಕಳುವು ಮಾಡಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಡಿಐಜಿ ವರ್ತಿಕಾ ಕಟಿಯಾರ್ ಅವರು ರೂಪ ಮೌದ್ಗಿಲ್ ವಿರುದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು. ಆದರೆ ಇದೀಗ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನೇ ವರ್ಗಾವಣೆ ಮಾಡಲಾಗಿದೆ.
ಐಪಿಎಸ್ ಡಿ ರೂಪಾ ಅವರ ವಿರುದ್ಧ ಗಂಭೀರ ಆರೋಪದೊಂದಿಗೆ ದೂರು ನೀಡಿರುವ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ಸೋಮವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೂರು ನೀಡಿದ ಬೆನ್ನಲ್ಲೇ ಇದೀಗ ವರ್ತಿಕಾ ಅವರನ್ನು ಗೃಹ ರಕ್ಷಕ ದಳದ ಡಿಐಜಿ ಮತ್ತು ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.