HomeBengaluru Newsವಾರ್ತಾ ಇಲಾಖೆಗೆ ಐಪಿಎಸ್ ಟಚ್: ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

ವಾರ್ತಾ ಇಲಾಖೆಗೆ ಐಪಿಎಸ್ ಟಚ್: ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

For Dai;y Updates Join Our whatsapp Group

Spread the love

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಗುರುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಲಾಖೆಯ ನಿರ್ಗಮಿತ ಆಯುಕ್ತ ಹಾಗೂ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನೂತನ ಆಯುಕ್ತರಿಗೆ ಶುಭಾಶಯ ಕೋರಿದರು. ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜೊತೆಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನು ಸಹ ಅನುಚೇತ್ ಅವರಿಗೆ ವಹಿಸಿದೆ.

ಕೋಲಾರ ಜಿಲ್ಲೆಯ ಮೂಲದ ಅನುಚೇತ್ ಅವರು ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದು, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ 2009ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.

2011ರಲ್ಲಿ ಪುತ್ತೂರಿನಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಸೇವೆ ಆರಂಭಿಸಿದ ಅವರು, ಬಳಿಕ ಸಿಐಡಿ ಎಸ್ಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹಾಗೂ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವರು, ಸಂಚಾರ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ ಅಳವಡಿಕೆಗೆ ವಿಶೇಷ ಕೊಡುಗೆ ನೀಡಿದ್ದರು.

ಪೊಲೀಸ್ ಇಲಾಖೆಯಲ್ಲಿ ನಡೆಸಿದ ಪರಿಣಾಮಕಾರಿ ತನಿಖೆ ಹಾಗೂ ಆಡಳಿತಾತ್ಮಕ ಸಾಧನೆಗಾಗಿ ಅವರಿಗೆ ಕೇಂದ್ರ ಗೃಹ ಸಚಿವರ ಅತ್ಯುತ್ತಮ ತನಿಖಾ ಪದಕವೂ ಲಭಿಸಿದೆ. ವಾರ್ತಾ ಇಲಾಖೆಗೆ ತಂತ್ರಜ್ಞಾನ ಆಧಾರಿತ ಕಾರ್ಯಪದ್ಧತಿ ಮತ್ತು ಆಡಳಿತಾತ್ಮಕ ಚುರುಕುತನ ತರುವ ನಿರೀಕ್ಷೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿ.ಬಿ., ಸಿ.ಆರ್. ನವೀನ್, ಉಪನಿರ್ದೇಶಕರಾದ ಬಿ.ಕೆ. ರಾಮಲಿಂಗಪ್ಪ, ಶಫಿ ಸಾದುದ್ದೀನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!