HomeWorld Newsಇರಾನ್ ಪ್ರತೀಕಾರದ ಅಬ್ಬರ: ಅಮೆರಿಕದ ಪ್ರಮುಖ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ!

ಇರಾನ್ ಪ್ರತೀಕಾರದ ಅಬ್ಬರ: ಅಮೆರಿಕದ ಪ್ರಮುಖ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ!

For Dai;y Updates Join Our whatsapp Group

ಟೆಹ್ರಾನ್: ಇರಾನ್‌ನ ಬಂದರು ಹಾಗೂ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಅಮೆರಿಕ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಪ್ರತಿದಾಳಿ ನಡೆಸಿದೆ.

ಬಹ್ರೇನ್‌ನಲ್ಲಿರುವ ಅಮೆರಿಕದ 5ನೇ ನೌಕಾಪಡೆಯ ಪ್ರಧಾನ ಕಚೇರಿ ಹಾಗೂ ಕುವೈತ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಅಮೆರಿಕದ ದಾಳಿಗೆ ತೀವ್ರ ಪ್ರತಿಕ್ರಿಯೆ ನೀಡುವುದಾಗಿ ಇರಾನ್‌ನ ಕ್ರಾಂತಿಕಾರಿ ಪಡೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಕ್ಷಿಪಣಿ ದಾಳಿಯ ಬಳಿಕ ಬಹ್ರೇನ್ ರಾಜಧಾನಿ ಮನಾಮದಲ್ಲಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ಬಳಿಕ ಭದ್ರತಾ ಸೈರನ್‌ಗಳನ್ನು ಮೊಳಗಿಸಲಾಗಿದೆ.

ಕುವೈತ್‌ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೂ ಇರಾನ್ ದಾಳಿ ನಡೆಸಿದೆ ಎನ್ನಲಾಗಿದ್ದು, ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ತಡೆಯಲು ಸಿದ್ಧತೆ ಮಾಡಿಕೊಂಡಿರುವುದಾಗಿ ಅಮೆರಿಕ ಪಡೆಗಳು ತಿಳಿಸಿವೆ.

ಇರಾನ್ ಮೇಲೆ ಅಮೆರಿಕದ ದಾಳಿ:

ಇದಕ್ಕೂ ಮುನ್ನ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಸಾಮರ್ಥ್ಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಅಮೆರಿಕ ಸೇನೆ ಇರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿತ್ತು. ಬಂದರ್ ಅಬ್ಬಾಸ್, ಸಿರಿಕ್, ಚಾಬಹಾರ್ ಮತ್ತು ಕೊನಾರಕ್ ಪ್ರದೇಶಗಳಲ್ಲಿ ಭಾರೀ ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ.

ಈ ದಾಳಿಯಲ್ಲಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಚಾಬಹಾರ್‌ನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಶಾಹಿದ್ ಬೆಹೆಶ್ಟಿ ಬಂದರು, ಕಲಾಂತರಿ ಬಂದರು ಹಾಗೂ ಸಮುದ್ರ ಸಂಚಾರ ನಿಯಂತ್ರಣ ವ್ಯವಸ್ಥೆಗೆ ಹಾನಿಯಾಗಿದೆ ಎನ್ನಲಾಗಿದೆ.

ಇರಾನ್‌ನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಬು ಮೂಸಾ ದ್ವೀಪದಲ್ಲಿ ಹಲವು ಸ್ಫೋಟಗಳು ಸಂಭವಿಸಿದ್ದು, ಚಾಬಹಾರ್ ಮತ್ತು ಕೊನಾರಕ್ ಪ್ರದೇಶಗಳಲ್ಲಿಯೂ ಸ್ಫೋಟದ ಘಟನೆಗಳು ವರದಿಯಾಗಿವೆ. ಈ ವೇಳೆ ಭಾರೀ ಬೆಂಕಿ ಕಾಣಿಸಿಕೊಂಡ ದೃಶ್ಯಗಳು ಹರಿದಾಡಿವೆ.

ಈ ಬೆಳವಣಿಗೆಗಳ ನಡುವೆ ಇರಾನ್ ತನ್ನ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ ಎನ್ನಲಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ವ್ಯಕ್ತವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img