ದುಬೈ: ದುಬೈನಲ್ಲಿ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಸೈನಿಕ ನೆಲೆಗಳು ಹಾಗೂ ಪ್ರದೇಶದ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ.
ಇದಕ್ಕೂ ಮುನ್ನ ಇಸ್ರೇಲ್-ಅಮೆರಿಕದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಿದ ಘಟನೆ ನಡೆದಿತ್ತು, ಅದರಿಂದ ಸಂಘರ್ಷ ಮತ್ತಷ್ಟು ತೀವ್ರವಾಗಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದ್ದಾರೆ.
ಮಂಗಳವಾರ ಬೆಳಗಿನ ಜಾವ ರಿಯಾದ್‌ನ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ಡಿಕ್ಕಿ ಹೊಡೆದು, ಸಣ್ಣ ಪ್ರಮಾಣದ ಬೆಂಕಿ ಹೊತ್ತಿಕೊಂಡಿತ್ತು. ಇದಕ್ಕೂ ಮುನ್ನ ಸೋಮವಾರ, ಕುವೈತ್‌ನ ಅಮೆರಿಕ ರಾಯಭಾರಿ ಕಚೇರಿಯಿಂದ ಹೊಗೆ ಕಾಣಿಸಿಕೊಂಡಿತ್ತು.



