ಬೆಂಗಳೂರು: ರಾಜೀನಾಮೆ ಕೊಟ್ಟರೆ ಮುಗಿದು ಹೋಗುತ್ತಾ? ನಾನು ತಪ್ಪೇ ಮಾಡಿಲ್ಲವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಡಾಗೆ ನಾವೇನು ಅಲ್ಲೇ ಕೊಡಿ ಎಂದು ಕೇಳಿರಲಿಲ್ಲ.
Advertisement
ಅವರೇ ವಿಜಯನಗರದಲ್ಲಿ ಕೊಟ್ಟಿದ್ದರು. ಆದರೆ ಈಗ ವಿವಾದದಿಂದ ಮನನೊಂದು ನನ್ನ ಯಜಮಾನರಿಗೆ ರಾಜಕೀಯ ತೇಜೋವಧೆ ಆಗುತ್ತಿದೆ. ಹಾಗಾಗಿ ಸೈಟ್ ಬೇಡವೇ ಬೇಡ ಎಂದು ವಾಪಸ್ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಸೈಟ್ ವಾಪಸ್ ನೀಡಿ ತಪ್ಪು ಒಪ್ಪಿಕೊಂಡಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಹೇಗೆ ತಪ್ಪು ಒಪ್ಪಿದಂತಾಗುತ್ತದೆ? ನನ್ನ ಹೆಂಡತಿ ಮನನೊಂದು ಸೈಟ್ ವಾಪಸ್ ಮಾಡಿದ್ದಾರೆ. ಬಿಜೆಪಿಗರು ಸುಳ್ಳು ಹೇಳೋದರಲ್ಲಿ ನಿಸ್ಸೀಮರು. ರಾಜೀನಾಮೆ ಕೊಟ್ಟರೆ ಮುಗಿದು ಹೋಗುತ್ತಾ? ನಾನು ತಪ್ಪೇ ಮಾಡಿಲ್ಲವಲ್ಲ ಎಂದು ಹರಿಹಾಯ್ದರು.