ಬೆಳಗಾವಿ: ಸಿ.ಟಿ ರವಿ ಓರ್ವ ಶಾಸಕ, ಅವರನ್ನು ಹೇಗೆ ಎನ್‌ಕೌಂಟರ್ ಮಾಡಲು ಸಾಧ್ಯ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ’ನನ್ನನ್ನು ಪೊಲೀಸರು ಎನ್‌ಕೌಂಟರ್ ಮಾಡೋ ಸಂಚು ರೂಪಿಸಿದ್ರು’ ಎಂಬ ಸಿ.ಟಿ ರವಿ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಸಿಟಿ ರವಿ ಓರ್ವ ವಿಧಾನ ಪರಿಷತ್ ಸದಸ್ಯ, ಅವರನ್ನು ಹೇಗೆ ಎನ್‌ಕೌಂಟರ್ ಮಾಡಲು ಸಾಧ್ಯ? ಸಿಟಿ ರವಿಗೆ ತೊಂದರೆ ಕೊಡಬೇಕು ಎಂದು ನಾವು ಠಾಣೆಯಿಂದ ಠಾಣೆಗೆ ಸುತ್ತಾಡಿಸಿಲ್ಲ.
ಹೋದ ಎಲ್ಲ ಕಡೆಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಲು ಶುರು ಮಾಡಿದ್ರು. ಹೀಗಾಗಿ ಠಾಣೆಯಿಂದ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ, ಸಂಸತ್ತು, ವಿಧಾನಸಭೆಯಲ್ಲಿ ಬಹಳಷ್ಟು ನಡೆದಿವೆ. ಘಟನೆಗೆ ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಈಗಲೂ ಅದೇ ರೀತಿ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು.



