• About
  • Advertise
  • Privacy & Policy
  • Contact
Wednesday, November 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ? ಡಿಸೆಂಬರ್ 16ಕ್ಕೆ ದಿನಾಂಕ ಫಿಕ್ಸ್!

Vijaya Sakshi News Desk by Vijaya Sakshi News Desk
November 24, 2026
in India News
ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ? ಡಿಸೆಂಬರ್ 16ಕ್ಕೆ ದಿನಾಂಕ ಫಿಕ್ಸ್!
0
SHARES
4
VIEWS
Share on Facebook

ನವದೆಹಲಿ: ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸ್ವದೇಶ ವಾಪಸಾತಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಡಿಸೆಂಬರ್ 16ರಂದು ಬಾಂಗ್ಲಾದೇಶಕ್ಕೆ ಮರಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದು, ಈ ಸಂಬಂಧ ತಮ್ಮ ಪ್ರಯಾಣಕ್ಕೆ ವಿಮಾನದ ವ್ಯವಸ್ಥೆ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹಸೀನಾ ಅವರ ವಕ್ತಾರ ಸೈಯದ್ ಮೊಜಮ್ಮೆಲ್ ಅಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಬಾಂಗ್ಲಾದೇಶದ ರಾಜಕೀಯ ಇತಿಹಾಸದಲ್ಲಿ ಡಿಸೆಂಬರ್ 16ಕ್ಕೆ ವಿಶೇಷ ಮಹತ್ವವಿದೆ. 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ವಿಮೋಚನಾ ಯುದ್ಧದಲ್ಲಿ ಬಾಂಗ್ಲಾದೇಶ ಸ್ವಾತಂತ್ರ್ಯ ಗಳಿಸಿದ ದಿನದ ಸ್ಮರಣಾರ್ಥ ಈ ದಿನವನ್ನು ವಿಜಯ ದಿನವನ್ನಾಗಿ ಆಚರಿಸಲಾಗುತ್ತದೆ. ಇದೇ ದಿನವನ್ನು ಆಯ್ಕೆ ಮಾಡಿಕೊಂಡಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಬಾಂಗ್ಲಾ ಸರ್ಕಾರಕ್ಕೆ ವಿಮಾನದ ಬೇಡಿಕೆ:

2024ರ ಆಗಸ್ಟ್‌ನಲ್ಲಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಮೀಸಲಾತಿ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಆಗಿನ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದರು. ಅಂದಿನಿಂದ ಅವರು ಭಾರತದಲ್ಲೇ ವಾಸಿಸುತ್ತಿದ್ದಾರೆ.

ಇದೀಗ ಭಾರತದಿಂದ ಢಾಕಾಗೆ ಪ್ರಯಾಣಿಸಲು ಬಾಂಗ್ಲಾದೇಶದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಬಿಮನ್ ಬಾಂಗ್ಲಾದೇಶ ಏರ್‌ಲೈನ್ಸ್ ಮೂಲಕ ವಿಮಾನದ ವ್ಯವಸ್ಥೆ ಮಾಡಬೇಕೆಂದು ಹಸೀನಾ ಕೋರಿದ್ದಾರೆ. ತಮ್ಮನ್ನು ದೇಶದಿಂದ ಹೊರಹಾಕಿದ ಬಳಿಕ ಮರಳಲು ಅಗತ್ಯ ವ್ಯವಸ್ಥೆ ಮಾಡುವುದು ಬಾಂಗ್ಲಾದೇಶ ಸರ್ಕಾರದ ಜವಾಬ್ದಾರಿ ಎಂಬುದು ಅವರ ವಕ್ತಾರರ ವಾದವಾಗಿದೆ.

ಆದರೆ, ಹಸೀನಾ ಅವರ ವಾಪಸಾತಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಸರ್ಕಾರದಿಂದ ಯಾವುದೇ ಅನುಮತಿ ಅಥವಾ ವಿಮಾನ ವ್ಯವಸ್ಥೆ ದೃಢಪಟ್ಟಿಲ್ಲ.

ಮರಳಿದರೆ ಬಂಧನ ಖಚಿತ?

ಶೇಖ್ ಹಸೀನಾ ಬಾಂಗ್ಲಾದೇಶಕ್ಕೆ ಮರಳಿದರೆ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಅಲ್ಲಿನ ಸಚಿವರು ಎಚ್ಚರಿಕೆ ನೀಡಿದ್ದಾರೆ. ಹಸೀನಾ ವಿರುದ್ಧದ ಪ್ರಕರಣಗಳ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಸರ್ಕಾರ ಅವರನ್ನು ಭಾರತದಿಂದ ಹಸ್ತಾಂತರಿಸುವಂತೆಯೂ ಒತ್ತಾಯಿಸುತ್ತಿದೆ. ಹೀಗಾಗಿ ಅವರ ವಾಪಸಾತಿ ಸುಲಭವಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

1,400 ಜನರ ಸಾವಿಗೆ ಕಾರಣವಾದ ಹಿಂಸಾಚಾರ:

2024ರಲ್ಲಿ ಸರ್ಕಾರಿ ಉದ್ಯೋಗಗಳ ಮೀಸಲಾತಿ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಆರಂಭಿಸಿದ ಪ್ರತಿಭಟನೆ ಬಳಿಕ ದೊಡ್ಡ ಮಟ್ಟದ ಹೋರಾಟವಾಗಿ ರೂಪುಗೊಂಡಿತ್ತು. ಪ್ರತಿಭಟನೆಯನ್ನು ನಿಯಂತ್ರಿಸಲು ಭದ್ರತಾ ಪಡೆಗಳನ್ನು ಬಳಸಿದ ಹಸೀನಾ ಸರ್ಕಾರದ ಕ್ರಮ ತೀವ್ರ ಟೀಕೆಗೆ ಗುರಿಯಾಗಿತ್ತು.

ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ, ಪ್ರತಿಭಟನೆ ಮತ್ತು ಹಿಂಸಾಚಾರದ ವೇಳೆ ಸುಮಾರು 1,400 ಜನರು ಸಾವನ್ನಪ್ಪಿದ್ದರು. ಈ ಘಟನೆಗಳಿಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ಮಾರಕ ಕ್ರಮ ಕೈಗೊಳ್ಳಲು ಆದೇಶಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ 2025ರ ನವೆಂಬರ್ 17ರಂದು ಹಸೀನಾ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಮರಣದಂಡನೆ ವಿಧಿಸಿತ್ತು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಅವಾಮಿ ಲೀಗ್‌ಗೂ ಸಂಕಷ್ಟ:

ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷದ ಚಟುವಟಿಕೆಗಳಿಗೆ ಬಾಂಗ್ಲಾದೇಶದಲ್ಲಿ ನಿಷೇಧ ಹೇರಲಾಗಿದೆ. ಪಕ್ಷದ ಹಲವು ನಾಯಕರು ದೇಶ ತೊರೆದಿದ್ದು, ಇನ್ನು ಕೆಲವರು ಬಂಧನದಲ್ಲಿದ್ದಾರೆ. ಮತ್ತೊಂದೆಡೆ, ಪಕ್ಷದ ಬೆಂಬಲಿಗರ ಪ್ರತಿಭಟನೆಗಳು ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ಒಂದೆಡೆ ಮರಣದಂಡನೆ ಶಿಕ್ಷೆ, ಮತ್ತೊಂದೆಡೆ ಪಕ್ಷದ ಮೇಲಿನ ನಿಷೇಧ ಹಾಗೂ ಬಂಧನದ ಎಚ್ಚರಿಕೆ. ಇಂತಹ ಸವಾಲುಗಳ ನಡುವೆ ಶೇಖ್ ಹಸೀನಾ ಡಿಸೆಂಬರ್ 16ರಂದು ನಿಜವಾಗಿಯೂ ಬಾಂಗ್ಲಾದೇಶಕ್ಕೆ ಮರಳುತ್ತಾರೆಯೇ ಎಂಬುದು ಈಗ ಅಂತರರಾಷ್ಟ್ರೀಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Tags: Bangladesh NewsBangladesh PoliticskannadanewsKarnatakasheikh hasinaSheikh Hasina ReturnVijayasakshivijayasakshinews
ShareSendShare
Previous Post

ರಾಜ್ಯದಲ್ಲಿ ಚಳಿಯ ನಡುವೆ ಮಳೆ ಸಾಧ್ಯತೆ; ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Next Post

ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಧರಣಿ: 9 ದಿನವಾದರೂ ಪಟ್ಟು  ಸಡಿಲಿಸದ ಆಶಾ ಕಾರ್ಯಕರ್ತೆಯರು!

ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಧರಣಿ: 9 ದಿನವಾದರೂ ಪಟ್ಟು ಸಡಿಲಿಸದ ಆಶಾ ಕಾರ್ಯಕರ್ತೆಯರು!

November 25, 2026
ಮಾದಪ್ಪನ ಹುಂಡಿಗೆ ಭಕ್ತರ ಮಹಾಪೂರ ಕಾಣಿಕೆ: 27 ದಿನಕ್ಕೆ ₹2.50 ಕೋಟಿ ಸಂಗ್ರಹ!

ಮಾದಪ್ಪನ ಹುಂಡಿಗೆ ಭಕ್ತರ ಮಹಾಪೂರ ಕಾಣಿಕೆ: 27 ದಿನಕ್ಕೆ ₹2.50 ಕೋಟಿ ಸಂಗ್ರಹ!

November 25, 2026
ಹಾಲಿವುಡ್ ಸಿನಿಮಾಗಳಿಗೆ ಪೈಪೋಟಿ ನೀಡಲಿರುವ ‘ರಾಮಾಯಣ’: ವಿಜ್ಯುವಲ್ ಎಫೆಕ್ಟ್ಸ್, ಸ್ಟಂಟ್ ವಿಭಾಗಗಳಲ್ಲಿ ಆಯ್ಕೆ

ಹಾಲಿವುಡ್ ಸಿನಿಮಾಗಳಿಗೆ ಪೈಪೋಟಿ ನೀಡಲಿರುವ ‘ರಾಮಾಯಣ’: ವಿಜ್ಯುವಲ್ ಎಫೆಕ್ಟ್ಸ್, ಸ್ಟಂಟ್ ವಿಭಾಗಗಳಲ್ಲಿ ಆಯ್ಕೆ

November 25, 2026
ಪಂಜಾಬಿ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಭೀತಿ: ಬೆಂಗಳೂರಿನಲ್ಲಿ ಹೈ ಅಲರ್ಟ್!

ಪಂಜಾಬಿ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಭೀತಿ: ಬೆಂಗಳೂರಿನಲ್ಲಿ ಹೈ ಅಲರ್ಟ್!

November 25, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಧರಣಿ: 9 ದಿನವಾದರೂ ಪಟ್ಟು  ಸಡಿಲಿಸದ ಆಶಾ ಕಾರ್ಯಕರ್ತೆಯರು!

ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಧರಣಿ: 9 ದಿನವಾದರೂ ಪಟ್ಟು ಸಡಿಲಿಸದ ಆಶಾ ಕಾರ್ಯಕರ್ತೆಯರು!

November 25, 2026
ಮಾದಪ್ಪನ ಹುಂಡಿಗೆ ಭಕ್ತರ ಮಹಾಪೂರ ಕಾಣಿಕೆ: 27 ದಿನಕ್ಕೆ ₹2.50 ಕೋಟಿ ಸಂಗ್ರಹ!

ಮಾದಪ್ಪನ ಹುಂಡಿಗೆ ಭಕ್ತರ ಮಹಾಪೂರ ಕಾಣಿಕೆ: 27 ದಿನಕ್ಕೆ ₹2.50 ಕೋಟಿ ಸಂಗ್ರಹ!

November 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper