ಹೊಸ ಕಾರು, ಬೈಕ್ ಖರೀದಿಸೋ ಪ್ಲ್ಯಾನ್ ಇದ್ಯಾ!? ಹಾಗಿದ್ರೆ ಈ ಸುದ್ದಿ ಮೊದಲು ನೋಡಿ!

0
Spread the love

ಬೆಂಗಳೂರು:- ಹೊಸ ಕಾರು, ಬೈಕ್ ಖರೀದಿಸೋ ಪ್ಲ್ಯಾನ್ ಇದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಈಗಾಗಲೇ ಕಾರು ಹಾಗೂ ಬೈಕ್‌ ದರಗಳು ಗಗನಕ್ಕೇರಿವೆ. ಈ ದುಬಾರಿ ದುನಿಯಾದಲ್ಲಿ ಸಿಲುಕಿರುವ ಬಡ ಹಾಗೂ ಮಧ್ಯಮವರ್ಗವು ಹೊಸ ವರ್ಷದ ಜನವರಿಯಲ್ಲಿ ಹೊಸ ಬೈಕು ಕಾರು ಖರೀದಿಸುವ ಪ್ಲ್ಯಾನ್‌ನಲ್ಲಿದ್ದರು. ಆದರೆ ರಾಜ್ಯ ಸರ್ಕಾರವು ಇವರಿಗೆಲ್ಲ ಶಾಕ್‌ ಕೊಟ್ಟಿದೆ.

Advertisement

ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.

ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ ಎಂದು ತಿಳಿದು ಬಂದಿದೆ.

ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಮಾತ್ರ ಗರಂ ಆಗಿದ್ದಾರೆ. ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ.

ದರ ಹೆಚ್ಚಳ ಸಂಬಂದ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್​ಡೇಟ್ ಮಾಡಲಾಗುತ್ತಿದೆ‌. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್​​ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.


Spread the love

LEAVE A REPLY

Please enter your comment!
Please enter your name here