HomeEntertainment‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಲು ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ?

‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಲು ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ?

For Dai;y Updates Join Our whatsapp Group

ಬಿಡುಗಡೆಗೂ ಮುನ್ನವೇ ಭಾರೀ ನಿರೀಕ್ಷೆ ಮೂಡಿಸಿರುವ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಇದೀಗ ನಯನತಾರಾ ಅವರ ಸಂಭಾವನೆ ವಿಚಾರದಿಂದ ಮತ್ತೆ ಸುದ್ದಿಯಲ್ಲಿದೆ. ವರದಿಗಳ ಪ್ರಕಾರ, ಚಿತ್ರದಲ್ಲಿನ ಪ್ರಮುಖ ಪಾತ್ರಕ್ಕಾಗಿ ನಯನತಾರಾ ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಪ್ಯಾನ್-ಇಂಡಿಯಾ ಸಿನಿಮಾಗೆ ಮೊದಲಿಗೆ 15 ಕೋಟಿ ರೂಪಾಯಿ ಸಂಭಾವನೆ ನೀಡುವಂತೆ ನಯನತಾರಾ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಹಲವು ಸುತ್ತಿನ ಮಾತುಕತೆಗಳ ಬಳಿಕ 12 ಕೋಟಿ ರೂಪಾಯಿಗೆ ಒಪ್ಪಂದ ಅಂತಿಮಗೊಂಡಿದೆ ಎಂದು ಸಿನಿ ವಲಯದಲ್ಲಿ ಮಾಹಿತಿ ಹರಿದಾಡುತ್ತಿದೆ.

ಚಿತ್ರದಲ್ಲಿ ನಯನತಾರಾ ಅವರ ಪಾತ್ರ ಪ್ರಮುಖವಾಗಿದ್ದರೂ, ಅವರಿಗೆ ಹೆಚ್ಚಿನ ಸ್ಕ್ರೀನ್ ಟೈಮ್ ಇರುವುದಿಲ್ಲ ಎನ್ನಲಾಗುತ್ತಿದೆ. ಆದರೂ ಅವರ ಜನಪ್ರಿಯತೆ, ಮಾರುಕಟ್ಟೆ ಮೌಲ್ಯ ಮತ್ತು ಪಾತ್ರದ ತೂಕವನ್ನು ಪರಿಗಣಿಸಿ ನಿರ್ಮಾಪಕರು ಭಾರೀ ಸಂಭಾವನೆ ನೀಡಲು ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಟಾಕ್ಸಿಕ್’ ಚಿತ್ರ ಈಗಾಗಲೇ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದ್ದು, ಇತ್ತೀಚೆಗೆ ಬಿಡುಗಡೆಯಾದ ‘ತಬಾಹಿ’ ವಿಡಿಯೋ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೇ ಚಿತ್ರದಲ್ಲಿ ನಟಿಸಿರುವ ಕಿಯಾರಾ ಅಡ್ವಾಣಿಗೂ 15 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂಬ ವರದಿಗಳು ಗಮನ ಸೆಳೆಯುತ್ತಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img