ಸಂತೃಪ್ತಿಗಿಂತ ಮಿಗಿಲಾದ ಸಂಪತ್ತಿಲ್ಲ : ರಂಭಾಪುರಿ ಶ್ರೀಗಳು

0
Ishtalinga Mahapuja and Dharma Awareness Ceremony
Spread the love

ವಿಜಯಸಾಕ್ಷಿ ಸುದ್ದಿ, ಭದ್ರಾವತಿ : ಮನುಷ್ಯನ ಮನಸ್ಸು ಸಿರಿವಂತವಾದರೆ ಸಂಪತ್ತು ಇಲ್ಲದಿದ್ದರೂ ನಾವು ಸಿರಿವಂತರೇ. ಮನಸ್ಸೇ ಬಡವಾಗಿದ್ದರೆ ನಮ್ಮಲ್ಲಿ ಸಂಪತ್ತು ಇದ್ದರೂ ನಾವು ಬಡವರೇ. ಸಂತೃಪ್ತಿಗಿಂತ ಶ್ರೇಷ್ಠವಾದ ಸಂಪತ್ತಿಲ್ಲವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಸೋಮವಾರ ನಗರದ ಸಹ್ಯಾದ್ರಿ ಬಡಾವಣೆಯಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಆಶೆ ಕಳೆದುಕೊಂಡು ಬದುಕಬಹುದು. ಆದರೆ ಆಸಕ್ತಿ ಕಳೆದುಕೊಂಡು ಬದುಕಬಾರದು. ಆಡುವ ಮಾತುಗಳಿಗೆ ಕೊಲ್ಲುವ ಮತ್ತು ಕಾಪಾಡುವ ಸಾಮರ್ಥ್ಯ ಎರಡೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ಬದುಕು ಬಲಗೊಳ್ಳುತ್ತದೆ. ಹಣವನ್ನು ಇವತ್ತಲ್ಲ ನಾಳೆಯಾದರೂ ಸಂಪಾದಿಸಬಹುದು. ಆದರೆ ಜೊತೆಗಿರುವ ವ್ಯಕ್ತಿಯನ್ನು ಕಳೆದುಕೊಳ್ಳಬಾರದು. ಸಮಯ, ಸ್ನೇಹ, ಆರೋಗ್ಯ ಇವುಗಳಿಗೆ ಬೆಲೆ ಕಟ್ಟಲಾಗದು. ಜೀವನದ ಕೆಟ್ಟ ಘಟನೆಗಳನ್ನು ಮರೆತುಬಿಡಬೇಕು. ಆದರೆ ಅದರಿಂದ ಕಲಿತ ಪಾಠಗಳನ್ನು ಯಾವಾಗಲೂ ಮರೆಯಬಾರದು.
ಸಾಸಿವೆಯಷ್ಟು ಸುಖಕ್ಕೆ ಸಾಗರದಷ್ಟು ಕಷ್ಟ ಬಿಟ್ಟಿದ್ದಲ್ಲ. ಸುಖ ದುಃಖಗಳಲ್ಲಿ ಸಮನಾಗಿ ಬಾಳುವುದೇ ಮನುಷ್ಯನ ಗುರಿಯಾಗಬೇಕು. ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವನ ಮೌಲ್ಯಗಳನ್ನು ಬೋಧಿಸಿ ಉದ್ಧರಿಸಿದ್ದಾರೆ. ದೇವರು ಮತ್ತು ಶ್ರೀ ಗುರುವನ್ನು ಯಾವತ್ತಿಗೂ ಮರೆಯಬಾರದೆಂದರು.
ಶ್ರೀ ಜಗದ್ಗುರು ರೇಣುಕಾಚಾರ್ಯ ಗುರಕುಲ ಸಾಧಕರಿಂದ ವೇದಘೋಷ, ಚನ್ನಗಿರಿಯ ಡಾ. ಕೇದಾರ ಶಿವಶಾಂತವೀರ ಶಿವಾಚಾರ್ಯರಿಂದ ಪ್ರಾರ್ಥನೆ ಜರುಗಿತು. ತಾವರೆಕೆರೆ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯರು ನಿರೂಪಿಸಿದರು. ಮನು ಸರ್ವರನ್ನು ಸ್ವಾಗತಿಸಿದರು. ಸ್ವಾಮಿ ವಂದನಾರ್ಪಣೆ ಸಲ್ಲಿಸಿದರು. ಶಿವಮೊಗ್ಗದ ಶಾಂತಾ ಆನಂದರಿAದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು.
ಈ ಪವಿತ್ರ ಸಮಾರಂಭದಲ್ಲಿ ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು, ಮಳಲಿಮಠದ ಡಾ||ನಾಗಭೂಷಣ ಶಿವಾಚಾರ್ಯರು, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರು ಪಾಲ್ಗೊಂಡು ಉಪದೇಶಾಮೃತವನ್ನಿತ್ತರು. ಇದೇ ಸಂದರ್ಭದಲ್ಲಿ ಲಿಂ. ಬಿ.ಎಚ್. ಮಹದೇವಪ್ಪನವರ ೧೦ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಕೂಡ್ಲಿಗೆರೆ ಹಾಲೇಶ್, ಬಿ.ಕೆ. ಜಗನ್ನಾಥ ಹಾಗೂ ವೀರಗಾಸೆ ತಂಡದವರು ಪಾಲ್ಗೊಂಡಿದ್ದರು.

Spread the love
Advertisement

LEAVE A REPLY

Please enter your comment!
Please enter your name here