ವಾಷಿಂಗ್ಟನ್/ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧ 28ನೇ ದಿನಕ್ಕೆ ಕಾಲಿಟ್ಟಿದ್ದು, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇನ್ನೂ ತೀವ್ರವಾಗಿ ಮುಂದುವರಿಯುತ್ತಿದೆ. ಇರಾನದ ಕೋಮ್ ನಗರದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ವಾಯುದಾಳಿ ನಡೆಸಿವೆ.
ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡ ಈ ದಾಳಿಯಲ್ಲಿ ಮೂವರು ಮನೆಗಳು ಧ್ವಂಸಗೊಂಡಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಹೆಜ್ಬೊಲ್ಲಾ ಸಂಘಟನೆಯನ್ನು ನಿಗ್ರಹಿಸಲು ಇಸ್ರೇಲ್ ಲೆಬನಾನ್ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಇತ್ತೀಚಿನ ದಾಳಿಯಲ್ಲಿ 13 ಮಂದಿ ಮೃತಪಟ್ಟಿದ್ದಾರೆ.
ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ತೀವ್ರ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ನಗರವನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಲಾಗಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ಕದನ ವಿರಾಮವನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.
ಈ ಅವಧಿಯಲ್ಲಿ ಇಂಧನ ಸ್ಥಾವರಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ತಿಳಿಸಲಾಗಿದೆ. ಇರಾನ್ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.



