ಮಂಗಳೂರು:- ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬುವುದು ಸುಳ್ಳು ವಿಚಾರ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಶಾಸಕ ಸುನಿಲ್ ಅವರ ಆರೋಪ ಸತ್ಯಕ್ಕೆ ದೂರವಾದದ್ದು. ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅಲ್ಲದೇ ಇರೋರನ್ನು ಎಪಿಎಲ್ ಮಾಡಿದ್ದೇವೆ. ಎಪಿಎಲ್ಗೆ ಹಾಕಿದವರನ್ನು ರದ್ದು ಮಾಡುವುದಿಲ್ಲ ಎಂದರು.
ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಎಪಿಎಲ್ನವರಿಗೆ ಸಬ್ಸಿಡಿ ರೇಟ್ನಲ್ಲಿ ಕೊಡ್ತಿದ್ದೆವು, ಹೆಚ್ಚಿನವರು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ ಸದ್ಯಕ್ಕೆ ಎಪಿಎಲ್ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ. ಪರಿಷ್ಕರಣೆ ಪೂರ್ತಿ ಆದ ಮೇಲೆ ಎಪಿಎಲ್ನವರು ಬೇಕೆಂದು ಮುಂದೆ ಬಂದ್ದರೆ ಖಂಡಿತಾ ಕೊಡುತ್ತೇವೆ ಎಂದು ತಿಳಿಸಿದ್ದಾರೆ.
ಒಂದೇ ಒಂದು ಎಪಿಎಲ್ ಕಾರ್ಡ್ ರದ್ದು ಆಗಿಲ್ಲ. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಕರ್ನಾಟಕದಲ್ಲಿ ಕಾರ್ಡ್ ಇದೆ. 6.50 ಕೋಟಿ ಜನ ಇದ್ದರೂ 4.50 ಕೋಟಿ ಜನರಿಗೆ ಕಾರ್ಡ್ ಕೊಟ್ಟಿದ್ದೇವೆ. ಅರ್ಹರಲ್ಲದವರು ಜಾಸ್ತಿ ಜನ ಇದ್ದಾರೆ ಎಂಬ ಭಾವನೆ ಬಂದಿದೆ.
ಇನ್ನೂ ಈ ವಿಚಾರವಾಗಿ ಸುನೀಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ. ನನ್ನ ಬಳಿ ಕೇಳಿದರೆ ಹೇಳುತ್ತೇನೆ ಎಂದು ಸಚಿವರು ಹೇಳಿದ್ದಾರೆ.