HomeGadag Newsರಾಜ್ಯಪಾಲರದು ಪಕ್ಷಪಾತದ ನಡೆ : ಮಹಮ್ಮದ ಶಾಲಗಾರ

ರಾಜ್ಯಪಾಲರದು ಪಕ್ಷಪಾತದ ನಡೆ : ಮಹಮ್ಮದ ಶಾಲಗಾರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಅವರ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳುತ್ತಿರುವುದು ಖಂಡನೀಯ. ಇದು ರಾಜ್ಯಪಾಲರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಗದಗ ಶಹರ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ ಶಾಲಗಾರ ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ, ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ. ಬಿಜೆಪಿ ಮತ್ತು ಮಿತ್ರಪಕ್ಷದ ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿರುವುದು ಕಾನೂನು ಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ. ರಾಜ್ಯಪಾಲರ ರಾಜಕೀಯ ಪ್ರೇರಿತ ಪುನರ ವಿಮರ್ಶಿಸಬೇಕೆಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img