ನವರಾತ್ರಿ ಉತ್ಸವ ಕಣ್ತುಂಬಿಕೊಳ್ಳುವುದೇ ಪುಣ್ಯ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಎಸ್‌ಎಸ್‌ಕೆ ಸಮಾಜದಿಂದ ಆಚರಿಸುತ್ತಿರುವ ದಸರಾ ಉತ್ಸವದ ಸಂಭ್ರಮ ನೋಡಿ ಸಂತಸವಾಗಿದೆ. 150 ವರ್ಷಗಳ ಇತಿಹಾಸ ಹೊಂದಿರುವ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವನ್ನು ಕಣ್ತುಂಬಿಕೊಳ್ಳುತ್ತಿರುವುದು ಪೂರ್ವಜನ್ಮದ ಪುಣ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

Advertisement

ನಗರದ ಹಳೇ ಸರಾಫ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರ್ಬಾರ್ ವೇದಿಕೆಯಲ್ಲಿ ಜರುಗಿದ ನಮ್ಮೂರ ದಸರಾ-2025ರ 5ಯ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎಸ್‌ಎಸ್‌ಕೆ ಸಮಾಜದ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಗಣ್ಯ ಉದ್ಯಮಿ ಲಕ್ಷ್ಮೀಶ್ವರದ ಆನಂದಸ್ವಾಮಿ ಜಿ.ಗಡ್ಡದೇವರಮಠ, ಎಸ್‌ಎಸ್‌ಕೆ ಸಮಾಜದ ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ಮಾಜಿ ಪಂಚರಾದ ಆರ್.ಕೆ. ಹಬೀಬ (ಬುಡ್ಡಣ್ಣ), ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ, ದಸರಾ ಕಮಿಟಿ ಚೇರಮನ್ ಅನಿಲ್ ಖಟವಟೆ ಉಪಸ್ಥಿತರಿದ್ದರು.

ನಗರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ, ಪಿಎಸ್‌ಐ ರೇಣುಕಾ ಮುಂಡೆವಾಡಿ, ಪಂಚ ಕಮಿಟಿ ಸದಸ್ಯರಾದ ಸುರೇಶಕುಮಾರ ಬದಿ, ಬಲರಾಮ ಬಸವಾ, ಪರಶುರಾಮ ಬದಿ, ವಿಷ್ಣುಸಾ ಶಿದ್ಲಿಂಗ, ಮಾರುತಿ ಪವಾರ, ಪ್ರಕಾಶ ಬಾಕಳೆ, ಅಂಬಾಸಾ ಖಟವಟೆ, ಗಂಗಾಧರ ಹಬೀಬ, ಗಣಪತಿ ಜಿತೂರಿ, ವಿನೋದ ಬಾಂಡಗೆ, ತರುಣ ಸಂಘದ ವಿಶ್ವನಾಥಸಾ ಸೋಳಂಕಿ, ರಾಘು ಬಾರಡ, ಶ್ರೀಕಾಂತ ಬಾಕಳೆ, ಗೋಪಾಲ ನಾಕೋಡ, ಸುಧೀರ ಕಾಟಿಗರ, ಅಶೋಕ ಬೇವಿನಕಟ್ಟಿ, ಮಾಧು ಬದಿ, ನಾಗರಾಜ ಖೋಡೆ, ಮಹಿಳಾ ಮಂಡಳದ ಅಧ್ಯಕ್ಷೆ ಉಮಾಬಾಯಿ ಬೇವಿನಕಟ್ಟಿ, ಗೀತಾಬಾಯಿ ಹಬೀಬ ಮುಂತಾದವರು ಉಪಸ್ಥಿತರಿದ್ದರು.

ರವಿ ಶಿದ್ಲಿಂಗ ಸ್ವಾಗತಿಸಿದರು. ಜಿ.ಎನ್. ಹಬೀಬ ನಿರೂಪಿಸಿದರು. ಬಲರಾಮ ಬಸವಾ ವಂದಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಅವರು ಮಾತನಾಡಿ, ನಮ್ಮಲ್ಲಿರುವ ದುಷ್ಟಶಕ್ತಿಗಳನ್ನು ದೂರ ಮಾಡಲು ನವರಾತ್ರಿ ಉತ್ಸವ ಆಚರಣೆ ಮುಖ್ಯವಾಗಿದೆ. ಈ ಹಬ್ಬದಲ್ಲಿ ಪೂಜೆ ಮತ್ತು ಪ್ರಾರ್ಥನೆ ಮಾಡುವ ಮೂಲಕ ನಮ್ಮಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಸರಾ ಉತ್ಸವದ ಸಂದರ್ಭದಲ್ಲಿ ಈ ದೇವಸ್ಥಾನದ ಕಾರ್ಯಕ್ರಮದಲ್ಲಿ ನಾನು ಕೂಡಾ ಪಾಲ್ಗೊಂಡಿರುವುದು ನನ್ನ ಪುಣ್ಯ ಎಂದು ಭಾವಿಸುತ್ತೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here